ಬಂಟ್ವಾಳ: ದ.ಕ. ಜಿ. ಪಂ. ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮಂಗಳೂರು ಉತ್ತರ ವಲಯ ಹಾಗೂ ಲೇಡಿ ಹಿಲ್ ವಿಕ್ಟೋರಿಯಾ ಪ್ರೌಢಶಾಲೆ ಉರ್ವ ಮಂಗಳೂರು ಇವರ ಸಹಯೋಗದಲ್ಲಿ 2025 –26 ನೆ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲಾ ಬಾಲಕ, ಬಾಲಕಿಯರ ಈಜು ಸ್ಪರ್ಧೆಯ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಅನನ್ಯ ಎ.ಆರ್ 100 ಮೀ. ಮತ್ತು 200ಮೀ. ಬ್ಯಾಕ್ ಸ್ಟ್ರೋಕ್ ನಲ್ಲಿ ಬೆಳ್ಳಿಯ ಪದಕ ಮತ್ತು 200 ಮೀ ಫ್ರೀ ಸ್ಟೈಲ್ ನಲ್ಲಿ ಕಂಚಿನ ಪದಕವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಈಕೆ ಕೆ.ಪಿ.ಎಸ್.ಮೊಂಟೆಪದವು ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಬಿ. ಮತ್ತು ಅಶೋಕ್ ಕುಮಾರ್ ರವರ ಪುತ್ರಿಯಾಗಿದ್ದು,ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ ಪೆಕ್ಟರ್ ಬಿ.ಕೆ ನಾಯ್ಕ್ ರವರ ಶಿಷ್ಯೆಯಾಗಿದ್ದಾಳೆ. ಅಲೋಶಿಯಸ್ ಈಜು ಕೊಳದ ಮುಖ್ಯ ತರಬೇತು ದಾರ ಲೋಕರಾಜ್ ವಿಟ್ಲ ಮತ್ತು ವಿನೋದ್ ಕಾರವಾರ ಇವರಿಂದ ತರಬೇತಿ ಪಡೆಯುತ್ತಿದ್ದಾರೆ
