ಬಂಟ್ವಾಳ: ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದ್ದು, ವಿದ್ಯಾರ್ಥಿಯ ಸರ್ವಾಂಗೀಣ ಪ್ರಗತಿಗೆ ಉತ್ತೇಜನ ನೀಡುತ್ತದೆ ಎಂದು ಶ್ರೀ ವೆಂಕಟರಮಣ ಸಾಮೀ ಕಾಲೇಜಿನ ಪ್ರಾಂಶುಪಾಲ ಎಂ.ಡಿ.ಮಂಚಿ ಹೇಳಿದರು.

ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟನರಿ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುತ್ತಿರುವ ಬಂಟ್ವಾಳ ಶ್ರೀ ವೆಂಕಟರಮಣ ಸಾಮೀ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟನರಿ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲರಾದ ಪೂರ್ಣೇಶ್ವರಿ ಭಟ್ ಮಾತನಾಡಿ ಭಾವನಾತ್ಮಕ ಸಂಬಂಧದ ಜೊತೆಯಲ್ಲಿ ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸುವುದಕ್ಕೆ ಎನ್.ಎಸ್.ಎಸ್ ಉತ್ತಮ ವೇದಿಕೆಯಾಗಿದೆ ಎಂದರು.
ಶ್ರೀ ವೆಂಕಟರಮಣ ಸಾಮೀ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುದರ್ಶನ್.ಬಿ ಶಿಬಿರಾರ್ಥಿಗಳಿಗೆ ಶುಭಹಾರೈಸಿದರು. ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರದೀಪ್ ಪೂಜಾರಿ,ಬಂಟ್ವಾಳ ಶ್ರೀ ವೆಂಕಟರಮಣ ಸಾಮೀ ಆಂಗ್ಲ ಮಾಧ್ಯಮ ಶಾಲೆ ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಕಿ ವೀಣಾ ದೇವಾಡಿಗ, ಎನ್.ಎಸ್.ಎಸ್ ಘಟಕ ನಾಯಕರಾದ ದೀಕ್ಷಿತ್ ಮತ್ತು ಪ್ರತೀಕಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆ ಶಿಬಿರಾಧಿಕಾರಿ ಗೀತಾ.ಯು ಸ್ವಾಗತಿಸಿ, ಸಹಶಿಬಿರಾಧಿಕಾರಿ ಮಾಯಿಲ.ಕೆ ವಂದಿಸಿ, ಸಹಶಿಬಿರಾಧಿಕಾರಿ ಭವಿತಾ.ಕೆ ಕಾರ್ಯಕ್ರಮ ನಿರೂಪಿಸಿದರು.
