ಬಂಟ್ವಾಳ:ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಜರಗುವ 48ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಪ್ರಯುಕ್ತ “ಮಾರ್ನೆಮಿದ ಗೊಬ್ಬು” ಎಂಬ ಕ್ರೀಡಾಕೂಟ ಕಲ್ಲಡ್ಕ ಉತ್ಸವದ ವಠಾರದಲ್ಲಿ ರವಿವಾರ ಜರಗಿತು.

ಓಂ ಶಕ್ತಿ ಫ್ರೆಂಡ್ಸ್ ನ ಗೌರವಾಧ್ಯಕ್ಷ ರತ್ನಾಕರ ಶೆಟ್ಟಿ ಮತ್ತು ಹಿರಿಯ ಕಬಡ್ಡಿ ಕ್ರೀಡಾಪಟು ಸಂಜೀವ ಸಪಲ್ಯ ಇವರು ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಉತ್ಸವ ಸಮಿತಿಯ ಅಧ್ಯಕ್ಷರಾದ ಯೋಗೀಶ್ ಪೂಜಾರಿ, ಕಾರ್ಯದರ್ಶಿ ಪ್ರಮಿತ್ ಶೆಟ್ಟಿ ವೇದಿಕೆಯಲ್ಲಿದ್ದರು.
ಪ್ರತಿಷ್ಠಾನದ ಅಧ್ಯಕ್ಷರಾದ ಯತೀನ್ ಕುಮಾರ್ ಸ್ವಾಗತಿಸಿದರು. ಪ್ರದಾನ ಕಾರ್ಯದರ್ಶಿ ವಜ್ರನಾಥ್ ಕಲ್ಲಡ್ಕ ವಂದಿಸಿದರು. ಪ್ರತಿಷ್ಠಾನದ ಕೋಶಾಧಿಕಾರಿ ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು
