ಬಂಟ್ವಾಳ :ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ಪಾಡಿ ಎಂಬಲ್ಲಿ ಅಕ್ರಮ ಕಸಾಯಿಖಾನೆಯನ್ನಾಗಿಸಿದ ಆರೋಪಿಯ ಮನೆಯನ್ನು ಮುಟ್ಟುಗೋಲು ಹಾಕಿರುವ ವಿದ್ಯಮಾನವೊಂದು ದ.ಕ.ಜಿಲ್ಲೆಯಲ್ಲಿ ಇದೇ ಮಾದಲ ಬಾರಿಗೆ ದಾಖಲಾಗಿದೆ.

ಪುದು ಗ್ರಾಮದ ಮಾರಿಪಳ್ಳ ಪಾಡಿನಿವಾಸಿಯಾದ ಹಸನಬ್ಬ ಎಂಬಾತನ ಮನೆ ಹಾಗೂ ಅಕ್ರಮ ಕಸಾಯಿಖಾನೆಯನ್ನು ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ.ಹಸನಬ್ಬ ವಿರುದ್ದ 2008 ಮತ್ತು 2017 ರಲ್ಲಿ ಅಕ್ರಮ ಗೋ ಕಳವು, ಗೋವಧೆಗೆ ಸಂಬಂಧಿಸಿ ಗೋಸಂರಕ್ಷಣಾ ಕಾಯಿದೆ ಮತ್ತು ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆಎಮ್ ಎಫ್ ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಲಾಗಿತ್ತು.
ಗೋ ಕಳ್ಳತನ ಮಾಡಿ ತಂದಂತಹ ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಮನೆಯಲ್ಲಿಯೇ ಅಕ್ರಮ ಕಸಾಯಿಖಾನೆ ನಿರ್ಮಿಸಿ ಅಲ್ಲಿ ಗೋವಧೆ ಮಾಡಿದ ಮಾಂಸ ಮಾಡುತ್ತಿದ್ದ ಎಂದು ಆರೋಪಿಸಲಾಗಿತ್ತು.
ಈತನು ಅಕ್ರಮವಾಗಿ ನಿರ್ಮಾಣ ಮಾಡಿರುವ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ಇತ್ತೀಚೆಗೆ ಪೊಲೀಸರು ವರದಿಯನ್ನು ಸಲ್ಲಿಸಿದ್ದರು
ಈ ವರದಿಯನ್ನಾಧರಿಸಿ ಸಹಾಯಕ ಆಯುಕ್ತರು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಂ 8(4) 8(5) ರಡಿಯಲ್ಲಿ ಹಸನಬ್ಬ ಎಂಬಾತನ ವಶದಲ್ಲಿರುವ ಮಾರಿಪಳ್ಳ ಪಾಡಿ ಎಂಬಲ್ಲಿರುವ ಮನೆ ಹಾಗೂ ಅಕ್ರಮ ಕಸಾಯಿಖಾನೆಯನ್ನುಜಪ್ತಿ ಮಾಡಿ,ಸೂಚನಾ ಫಲಕವನ್ನು ಹಾಕಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮನೆಯನ್ನೇ ಮುಟ್ಟುಗೋಲು ಮಾಡಿರುವುದು ಇದು ಮೊದಲನೆಯ ಪ್ರಕರಣವಾಗಿದೆ.
