ಗುರುಪುರ : ಕೃಷಿ ಇಲಾಖೆ ಮಂಗಳೂರು ಮತ್ತು ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇವರ ಜಂಟಿ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ರಾಷ್ಟಿçÃಯ ಕೃಷಿ ವಿಸ್ತರಣೆ ಉಪ ಅಭಿಯಾನ ಎಟಿಎಂಎ/ಆತ್ಮ ಯೋಜನೆಯಡಿ ಅ. ೪ರಂದು ಬೆಳಿಗ್ಗೆ ೯:೩೦ಕ್ಕೆ ವಾಮಂಜೂರಿನಲ್ಲಿರುವ ಸಂಘದ ಸಭಾಂಗಣದಲ್ಲಿ `ಕಿಸಾನ್ ಗೋಷ್ಠಿ’ ನಡೆಯಲಿದೆ.

ಕಿಸಾನ್ ಗೋಷ್ಠಿ ಜೊತೆಗೆ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆಗಳಿಂದ ಇಲಾಖಾ ಮಾಹಿತಿ ಹಾಗೂ ಕೃಷಿ ಇಲಾಖೆಯಿಂದ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಲಿದ್ದು, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಹಾಗೂ ಕೃಷಿ ಆಸಕ್ತರು ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷ ಓಂ ಪ್ರಕಾಶ್ ಶೆಟ್ಟಿ ಅವರು ಮನವಿ ಮಾಡಿಕೊಂಡಿದ್ದಾರೆ

By suddi9

Leave a Reply

Your email address will not be published. Required fields are marked *