Published On: Tue, Oct 7th, 2025

80 ಮಂದಿ ರಕ್ತದಾನ, ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

ಬಂಟ್ವಾಳ: ಸಮಾಜದಲ್ಲಿ ರೋಗ ರುಜಿನಗಳಿಗೆ ಔಷಧಿ ಪಡೆಯುವುದಕ್ಕಿಂತಲೂ ರೋಗ ಬಾರದಂತೆ ಮುಂಜಾಗ್ರತೆ ವಹಿಸುವುದರ ಜೊತೆಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸಲು ಸಾಧ್ಯವಿದೆ ಎಂದು ಜಿಲ್ಲಾ ರೋಟರಿ ಮಾಜಿ ಗವರ್ನರ್ ಎನ್.ಪ್ರಕಾಶ್ ಕಾರಂತ್ ಹೇಳಿದ್ದಾರೆ.

 ಸಿದ್ಧಕಟ್ಟೆ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಮತ್ತು ವಲಯ ಬಂಟರ ಸಂಘ ಸಹಿತ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಮತ್ತು ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಸಿದ್ಧಕಟ್ಟೆ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಏರ್ಪಡಿಸಿದ್ದ ಬೃಹತ್ ರಕ್ತದಾನ ಮತ್ತು ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. 

ನಿವೃತ್ತ ಪ್ರಾಂಶುಪಾಲ ಪ್ರೊ.ಜಯಕುಮಾರ್ ಶೆಟ್ಟಿ, ಹೃದ್ರೋಗ ತಜ್ಞ ಡಾ.ಪುರುಷೋತ್ತಮ ರಾಮಯ್ಯ, ಡಾ.ಸಂಗೀತ ಶೆಟ್ಟಿ ಸಿದ್ಧಕಟ್ಟೆ ಶುಭ ಹಾರೈಸಿದರು. 

ಇದೇ ವೇಳೆ ಹೃದ್ರೋಗ ತಜ್ಷ ಡಾ.ಪುರುಷೋತ್ತಮ ರಾಮಯ್ಯ ಇವರಿಗೆ ಸನ್ಮಾನ ಮತ್ತು ಆಶಾ ಕಾರ್ಯಕರ್ತೆಯರನ್ನು ಅಭಿನಂದಿಸಲಾಯಿತು. ಅಂಚೆ ಇಲಾಖೆ ಆರೋಗ್ಯ ವಿಮೆ ಬಗ್ಗೆ ಗುರುಪ್ರಸಾದ್ ಮಾಹಿತಿ ನೀಡಿದರು.  

ರೋಟರಿ ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಪಿ.ಜಯಪ್ರಕಾಶ್, ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ ಮತ್ತಿತರರು ಇದ್ದರು.

ವಲಯ ಬಂಟರ ಸಂಘದ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ ಸ್ವಾಗತಿಸಿ, ವಲಯ ಬಿಲ್ಲವರ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ ಪ್ರಸ್ತಾವನೆಗೈದರು.ಲೊರೆಟ್ಟೋಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ವಿಜಯ ಫೆನರ್ಾಂಡಿಸ್ ವಂದಿಸಿದರು. ಸುಭಾಸ್ ಸಂಗಬೆಟ್ಟು ಕಾರ್ಯಕ್ರಮ ನಿರೂಪಿಸಿದರು

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter