ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಕೆಲಿಂಜ ಹಾಗೂ ವೀರಕಂಭ ಒಕ್ಕೂಟದ 20 ನೇ  ವಾರ್ಷಿಕೋತ್ಸವ  ಕೆಲಿಂಜ ಶ್ರೀಕೇತನ ಸಭಾಭವನದಲ್ಲಿ ನಡೆಯಿತು.ಕೆಲಿಂಜ ಒಕ್ಕೂಟ ಅಧ್ಯಕ್ಷರಾದ ದಯಾನಂದ ಗೌಡರವರ  ಅಧ್ಯಕ್ಷತೆ ವಹಿಸಿದ್ದರು.


ಹಿಂದೂ ಧಾರ್ಮಿಕ  ಸೇವಾ ಸಮಿತಿ ಅಧ್ಯಕ್ಷ  ಕೊರಗಪ್ಪ  ಗೌಡ ಅವರುಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿ,  ಶ್ರೀ ಕ್ಷೇತ್ರ ಧರ್ಮಸ್ಥಳದ  ಗ್ರಾಮಾಭಿವೃದ್ಧಿ ಯೋಜನೆ ಮೂಲಕ ನೀಡಲ್ಪಟ್ಟ ಅನುದಾನ,ಕೊಡುಗೆಯನ್ನ  ಸ್ಮರಿಸಿದರು.

  ವಿಟ್ಲ ನಗರ ಪಂಚಾಯತ್ ಅಧ್ಯಕ್ಷ ಕರುಣಾಕರ ಗೌಡ ನೈತೊಟ್ಟು ಮಾತನಾಡಿ   ಸುಭಿಕ್ಷ ಸಮಾಜ ನಿರ್ಮಾಣದಲ್ಲಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆಯವರ  ದೂರದೃಷ್ಟಿಯ ಯೋಚನೆಗಳು ಬಹಳ ಪ್ರಾಮುಖ್ಯತೆ ಪಡೆದಿದೆ ಎಂದರು.
ವಿಟ್ಲ ಗ್ರಾಮೀಣ ಬ್ಯಾಂಕ್ ನಿರ್ದೇಶಕ ವಿಶ್ವನಾಥ ಎಂ ಮಾತನಾಡಿದರು.ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಯೋಜನೆಯ ನಡೆದು ಬಂದ ದಾರಿ, ಶ್ರೀ ಕ್ಷೇತ್ರದಿಂದ ಸಮಾಜಕ್ಕೆ ಕೊಟ್ಟ ಕೊಡುಗೆಗಳು, ಕ್ಷೇತ್ರದ ವತಿಯಿಂದ ನಡೆಯುವ ಸೇವಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿಕಳೆದ 20 ವರ್ಷಗಳಿಂದ ಒಕ್ಕೂಟದ ಪದಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದವರನ್ನು ಗುರುತಿಸಿ ಗೌರವಿಸಲಾಯಿತು.


  ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ, ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ಲಲಿತ, ಕಲ್ಲಡ್ಕ ವಲಯ ಜನ ಜಾಗೃತಿ ವೇದಿಕೆ  ಅಧ್ಯಕ್ಷ ಭಟ್ಯಪ್ಪ ಶೆಟ್ಟಿ,ವೀರಕಂಬ ಶ್ರೀ ಶಾರದಾ ಭಜನ ಮಂದಿರ ಸಂಚಾಲಕ ನಾರಾಯಣ ಭಟ್, ವೀರಕಂಬ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ  ವೀರಪ್ಪ ಮೂಲ್ಯ, ದೈವ ಪರಿಚಾರಕ ಶೇಖರ ಪೂಜಾರಿ,  ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ,  ದೇವಾಡಿಗರ ಭವನ ಮಂಗಳಪಧವ್ ಅಧ್ಯಕ್ಷ ಯತೀಶ್,ವಿರಕಂಬ ಒಕ್ಕೂಟ ಅಧ್ಯಕ್ಷ ಶಾಂಭವಿ ಆಚಾರ್ಯ,ಬೋಳಂತೂರು ಒಕ್ಕೂಟ ಅಧ್ಯಕ್ಷೆ ಸೀತಾ, ಗೊಳ್ತಮಜಲು ಎ ಒಕ್ಕೂಟ ಅಧ್ಯಕ್ಷ ಪ್ರೇಮ, ,ಮಾಮೇಶ್ವರ ಒಕ್ಕೂಟ ಅಧ್ಯಕ್ಷ  ಹರೀಶ್ ವಿ, ವೀರಕಂಬ ಒಕ್ಕೂಟ ಅಧ್ಯಕ್ಷ ಶಾಂಭವಿ ಆಚಾರ್ಯ, ನೆಟ್ಲಾ ಒಕ್ಕೂಟ ಅದ್ಯೇಕ್ಷ  ಸೀತಾರಾಮ್ ಮೊದಲಾದವರು ಉಪಸ್ಥಿತರಿದ್ದರು.


ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕ ಸುಖರಾಜ್ ಸ್ವಾಗತಿಸಿ, ಸೇವಾಪ್ರತಿನಿಧಿ ವಿಜಯ  ವರದಿ ವಾಚಿಸಿ,ರಂಜಿನಿ ವಂದಿಸಿದರು. ರವೀಶ್ ಆಚಾರ್ಯ  ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಮೊದಲು ಶ್ರೀ ಕೆಲಿಂಜೇಶ್ವರಿ  ಭಜನಾ  ಮಂಡಳಿ ಸದಸ್ಯರಿಂದ ಭಜನಾ ಸಂಕೀರ್ತನ ಕಾರ್ಯಕ್ರಮ, ಹಾಗೂ ಸಭಾ ಕಾರ್ಯಕ್ರಮದ  ಬಳಿಕ  ವಿವಿಧ ಮನೋರಂಜನ ಕಾರ್ಯಕ್ರಮ ಜರಗಿತು

By Suddi9

Leave a Reply

Your email address will not be published. Required fields are marked *