ಬಂಟ್ವಾಳ : ತಾಲೂಕಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯು ಬಂಟ್ವಾಳ ತಾಲೂಕು ಪಂಚಾಯಿತಿಯ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ಮಂಗಳವಾರ ನಡೆಯಿತು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಮಾನ್ಯ ವ್ಯಕ್ತಿಯೊಬ್ಬರು ಸಾಧನೆ ಮೂಲಕ ಎತ್ತರಕ್ಕೇರಬಹುದು ಎಂಬುದಕ್ಕೆ ಮಹರ್ಷಿ ವಾಲ್ಮೀಕಿ ಜೀವನ ನಿದರ್ಶನ ಎಂದರು.


ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿಯವರು ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ .ವಿ.ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಮರಾಠಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಶೋಕ್ ನಾಯ್ಕ್ ಕೆದಿಲ, ಮುಖಂಡರಾದ ಪಿ.ಬಿ.ಮಹಾಲಿಂಗ ನಾಯ್ಕ್ ಪುಣಚ, ಬಂಟ್ವಾಳ ತಹಸೀಲ್ದಾರ್ ಮಂಜುನಾಥ್, ತಾ.ಪಂ.ಇಒ ಸಚ್ಚಿನ್ ಕುಮಾರ್ ಶುಭ ಹಾರೈಸಿದರು.


ದೇವಸ್ಯಮುಡೂರು ಶಾಲೆಯ ಶಿಕ್ಷಕಿ ಹರಿಣಾಕ್ಷಿಪ್ರಧಾನ ಭಾಷಣಗೈದು ತನ್ನ ಸಾಧನೆಯಿಂದ ವ್ಯಕ್ತಿ ಶ್ರೇಷ್ಠ ವಾಗುವುದಕ್ಕೆ ನಿದರ್ಶನವಾಗಿ ಮಹರ್ಷಿ ವಾಲ್ಮೀಕಿಯನ್ನು ಕಾಣಬಹುದು ಎಂದು ಹೇಳಿದರು.
ಈ ಸಂದರ್ಭ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.

By suddi9

Leave a Reply

Your email address will not be published. Required fields are marked *