ಸಂಸ್ಕಾರ ಶಿಬಿರವು ವಿದ್ಯಾರ್ಥಿಗಳ ಜೀವನದಲ್ಲಿ ಬಹು ಮುಖ್ಯ : ಕಜಂಪಾಡಿ ಸುಬ್ರಹ್ಮಣ್ಯ ಭಟ್
ಬಂಟ್ವಾಳ: ಕುಟುಂಬ, ಶಾಲೆ ಹಾಗೂ ಸಮಾಜ ಇವುಗಳು ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಲಿರುವ ಕೇಂದ್ರವಾಗಿದ್ದು, ಇಂತಹ ಸಂಸ್ಕಾರ ಶಿಬಿರವು ವಿದ್ಯಾರ್ಥಿಗಳ ಜೀವನದಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದುರಾಷ್ಟ್ರೀಯ ಸ್ವಯಂಸೇವಕ ಸಂಘದ ಕುಟುಂಬ ಪ್ರಭೋದಿನಿ ರಾಷ್ಟ್ರೀಯ ಮಾರ್ಗದರ್ಶಕ ಮಂಡಳಿಯ ಸದಸ್ಯರಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರು ಹೇಳಿದ್ದಾರೆ.

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ದಲ್ಲಿ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ “ಉತ್ಥಾನ” ಇದರ ಸಮಾರೋಪವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ “ಉತ್ಥಾನ” ಇದರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಬಂಧುತ್ವ ಭಾವನೆಯನ್ನು ಬೆಳೆಸಿಕೊಳ್ಳಬೇಕು , ಸಾಮಾಜಿಕ ಜಾಲತಾಣಗಳ ಬಗ್ಗೆ ಎಚ್ಚರವಿದ್ದು, ಪರಿಸರ ಸಂರಕ್ಷಣೆ, ಸ್ವದೇಶಿ ವಸ್ತುಗಳ ಬಳಕೆ ನಮ್ಮೆಲ್ಲರ ಜವಾಬ್ದಾರಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮ ವಿದ್ಯಾ ಕೇಂದ್ರ ಸಂಸ್ಥಾಪಕರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ, ರಾಷ್ಟ್ರ ಸೇವಿಕ ಸಮಿತಿಯ ದಕ್ಷಿಣ ಪ್ರಾಂತ್ಯದ ಕಾರ್ಯಕಾರಿಣಿ ಮಾರ್ಗದರ್ಶಕ ಮಂಡಳಿಯ ಸದಸ್ಯರಾದ ಡಾ. ಕಮಲ ಪ್ರಭಾಕರ್ ಭಟ್,ಶ್ರೀರಾಮ ವಿದ್ಯಾ ಕೇಂದ್ರದ ಸಂಚಾಲಕರಾದ ವಸಂತ ಮಾಧವ ಸಂಚಾಲಕರು ಕಲ್ಲಡ್ಕ,ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಅವರು ಉಪಸ್ಥಿತರಿದ್ದರು. ಶ್ರೀಮತಿ ಚೈತನ್ಯ ಕಾರ್ಯಕ್ರಮವನ್ನು ನಿರ್ವಹಿಸಿದರು.



