ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ ಅಂತರ್ ಕಾಲೇಜು ಪಿಯು ಫೆಸ್ಟ್- ಲೋಗೋ ಬಿಡುಗಡೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಅಕ್ಟೋಬರ್ 25 ರಂದು ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದಲ್ಲಿ ನಡೆಯಲಿರುವ ಫೆಸ್ಟ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಲೋಗೋ ಬಿಡುಗಡೆ ಕಾರ್ಯಕ್ರಮವು ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಆಮಂತ್ರಣ ಪತ್ರಿಕೆ ಹಾಗೂ ಲೋಗೋ ಬಿಡುಗಡೆಗೊಳಿಸಿದರು.
ಭಾರತ್ ಸರ್ವಿಸಸ್ ಮಾಲಕ ಕಿಶನ್ ಮದೆಪ್ಪಾಡಿ, ಸ್ಟಾರ್ ಇನ್ಫೋಟೆಕ್ ಮಾಲಕ ಜಯಪ್ರಶಾಂತ್, ಶ್ರೀರಾಮ ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾಲೇಜು ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ, ಶ್ರೀರಾಮ ವಿದ್ಯಾಕೇಂದ್ರ ಆಡಳಿತ ಮಂಡಳಿ ಸದಸ್ಯರಾದ ಲಕ್ಷ್ಮೀ ರಘುರಾಜ್, ಧೀರಜ್ ಬಲ್ಲೆಕೋಡಿ, ಅಜಿತ್ ಕಲ್ಲಡ್ಕ, ಅಜಿತ್ ಪ್ರಭು ಮುಲಾರು, ಶ್ರೀರಾಮ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರ್, ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ದಿನೇಶ್ ಉಪಸ್ಥಿತರಿದ್ದರು. ಅರ್ಥಶಾಸ್ತ್ರದ ಉಪನ್ಯಾಸಕಿ ಸಂಧ್ಯಾಕುಮಾರಿ ಕಾರ್ಯಕ್ರಮ ನಿರ್ವಹಿಸಿದರು.



