ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಆಮಂತ್ರಣ ಪತ್ರಬಿಡುಗಡೆ
ಬಂಟ್ವಾಳ: ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ನ. 26 ರಂದು ಬ್ರಹ್ಮಶ್ರೀ ನಿಲೇಶ್ವರ ಕೆ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ನಡೆಯಲಿದ್ದು,ಇದರ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಅವರು ಅಮಂತ್ರಣಪತ್ರವನ್ನುಬಿಡುಗಡೆಗೊಳಿಸಿ,ಶುಭಹಾರೈಸಿದರು.
ಜಾತ್ರಾ ಸಂದರ್ಭ ವಿವಿಧ ಧಾರ್ಮಿಕ, ಭಜನಾ ಸಂಕೀರ್ತನೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದದ್ದು,ಅನ್ನಸಂತರ್ಪಣೆಯ ಇರಲಿದೆ.
ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ,ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಕೆ ರಾಧಾಕೃಷ್ಣ ಆಳ್ವ, ಸುಧಾಕರ ಕೆ.ಟಿ, ಕಿಶನ್ ಶೇಣವ,ಸೋಮನಾಥ,ಸುಭಾಷ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು



