ಅ. ೨೪ರಂದು ಗುರುಪುರಜಂಗಮ ಮಠದ ಶಿಲಾನ್ಯಾಸ
ಗುರುಪುರ : ಇಲ್ಲಿನ ಅತಿ ಪುರಾತನವಾದ ಶ್ರೀ ನೀಲಕಂಠೇಶ್ವರ ದೇವಸ್ಥಾನ ಶ್ರೀ ಜಂಗಮ ಸಂಸ್ಥಾನ ಮಠ ಇದರ ಜೀರ್ಣೋದ್ಧಾರ ಪ್ರಯುಕ್ತ ಅ. ೨೪ರಂದು ಗುರುಪುರ ಶ್ರೀ ಜಂಗಮ ಸಂಸ್ಥಾನ ಮಠಾಧ್ಯಕ್ಷರಾದ ಶ್ರೀ ರುದ್ರಮುನಿ ಮಹಾಸ್ವಾಮಿಯವರ ಮುಂದಾಳತ್ವದಲ್ಲಿ ಶಿಲಾನ್ಯಾಸ ನೆರವೇರಲಿದೆ.

ಶುಕ್ರವಾರ ಬೆಳಿಗ್ಗೆ ೯:೧೦ರ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮತ್ತು ಸುತ್ತೂರು ಶ್ರೀ ವೀರ ಸಿಂಹಾಸನ ಸಂಸ್ಥಾನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕೇಂದ್ರದ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶಯ ಭಾಷಣ ಮಾಡಲಿದ್ದಾರೆ. ಸಚಿವರಾದ ಈಶ್ವರ ಖಂಡ್ರೆ, ಎಂ. ಬಿ. ಪಾಟೀಲ್, ಎಸ್. ಎಸ್. ಮಲ್ಲಿಕಾರ್ಜುನ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ರಾಜೇಶ್ ನಾಯ್ಕ್, ಎಂಎಲ್‌ಸಿ ಮಂಜುನಾಥ ಭಂಡಾರಿ, ಶ್ರೀ ವೇದಮೂರ್ತಿ ಚಂದ್ರಕಾAತ ಭಟ್, ಕುಲದೀಪ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ರಮಾನಾಥ ರೈ, ಕೃಷ್ಣ ಪಾಲೆಮಾರ್, ಬಿ. ನಾಗರಾಜ ಶೆಟ್ಟಿ, ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ ಆರ್. ಪೂಜಾರಿ, ಸೋಮಶೇಖರ್, ಸಿ. ಎಸ್. ಪುಟ್ಟರಾಜು, ಗಂಗಾAಬಿಕೆ ಮಲ್ಲಿಕಾರ್ಜುನ, ಬಿ. ಎಸ್. ಸಚ್ಚಿದಾನಂದ ಮೂರ್ತಿ, ಮನೋಹರ ಗಂಗಾಧರಪ್ಪ, ವಿನುತಾ ಆರ್ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು, ಊರ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.



