ಶಿಕ್ಷಣದಿಂದ ಪ್ರಜ್ಞಾವಂತ ಸಮಾಜ ನಿರ್ಮಾಣ ಸಾದ್ಯ: ಓಡಿಯೂರು
ಬಂಟ್ವಾಳ :ಶಿಕ್ಷಣದಿಂದ ಮಾತ್ರ ಪ್ರಜ್ಞಾವಂತ ಸಮಾಜ ನಿರ್ಮಾಣ ಸಾದ್ಯ,ಪ್ರಸ್ತುತ ಕಾಲಘಟ್ಟದಲ್ಲಿ ನೈತಿಕ ಮೌಲ್ಯ ತುಂಬಿದ ಶಿಕ್ಷಣದ ಅನಿವಾರ್ಯತೆ ಇದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.

ಬೆಂಜನಪದವು ಶುಭಲಕ್ಷ್ಮಿ ಸಭಾಂಗಣದಲ್ಲಿ ನಡೆದ ಸದಾಶಿವ ಶಿಕ್ಷಣ ಪ್ರತಿಷ್ಠಾನ ರಿ ಇದರ ಅಶ್ರಯದಲ್ಲಿ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆಯಲ್ಲಿ ಆರಂಭಗೊಳ್ಳಲಿರುವ ನೂತನ ವಿದ್ಯಾಸಂಸ್ಥೆಯ ನಾಮಕರಣ ಹಾಗೂ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಅವರು ಆರ್ಶೀವಚನಗೈದರು.
ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ಬಿ ರಮಾನಾಥ ರೈಯವರು ನೂತನ ವಿದ್ಯಾಸಂಸ್ಥೆಯ ವೆಬ್ಸೈಟ್ ಗೆ ಚಾಲನೆ ನೀಡಿ ಮಾತನಾಡಿ, ಶಿಕ್ಷಣ ನಮ್ಮೆಲ್ಲರ ಹಕ್ಕಾಗಿದೆ, ಸುಂದರ ಸುಶಿಕ್ಷಿತ ಸಮಾಜ ನಿರ್ಮಾಣಕ್ಕೆ ವಿದ್ಯಾ ಸಂಸ್ಥೆ ಪೂರಕವಾಗಿ ಕಾರ್ಯನಿರ್ವಹಿಸಲಿ ಎಂದದರು.
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.
ಸದಾಶಿವ ಶಿಕ್ಷಣ ಪ್ರತಿಷ್ಠಾನ (ರಿ)ಇದರ ಅಧ್ಯಕ್ಷ ಅಮೃತ್ ಯು ರೈ ಪ್ರಸ್ತಾವನೆಗೈದರು. ಪ್ರಾಂಶುಪಾಲರಾದ ಮಹೇಶ್ ಕೆ ಎನ್ ಪುತ್ತೂರು, ಕಳ್ಳಿಗೆ ಗ್ರಾ ಪಂ ಅಧ್ಯಕ್ಷ ಪುರುಷೋತ್ತಮ ಕೊಟ್ಟಾರಿ, ಸದಾಶಿವ ಪ್ರತಿಷ್ಠಾನದ ಕಾರ್ಯದರ್ಶಿ ರಕ್ಷಿತಾ ಅಮೃತ್ ರೈ, ಕೋಶಾಧಿಕಾರಿ ಅಶ್ವಥ್, ಟ್ರಸ್ಟಿ ಬಿ ಮೋಹನ್ ಕುಮಾರ್ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಟ್ರಸ್ಟಿ ಸಮತಾ ಕೆ ಜೆ ಸ್ವಾಗತಿಸಿ, ಟ್ರಸ್ಟಿ ದೀಪಿಕಾ ಸಂದೇಶ್ ವಂದಿಸಿದರು. ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.



