ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ರಾಜ್ಯಮಟ್ಟದ” ಉತ್ಕರ್ಷ್ ೨೦೨೫”
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ದ. ಕ ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದ ಫೆಸ್ಟ್ “ಉತ್ಕರ್ಷ್ ೨೦೨೫” ಕಾರ್ಯಕ್ರಮ ಶನಿವಾರ ನಡೆಯಿತು.

ವಿದ್ಯಾಕೇಂದ್ರದ ಹಿರಿಯ ವಿದ್ಯಾರ್ಥಿ, ಮಂಗಳೂರು ಲೋಟಾಸ್ ಪ್ರಾಪರ್ಟೀಸ್ ಇದರ ಕಾನೂನು ಸಲಹೆಗಾರರಾಗಿರುವ ಲತೀಶ್ ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ|ಪ್ರಭಾಕರ್ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮತಾನಾಡಿ, ಸಂಸ್ಕಾರದ ಜೊತೆಗೆ ಶಿಕ್ಷಣವನ್ನು ಕೊಡುತ್ತಾ ವಿದ್ಯಾರ್ಥಿಗಳಲ್ಲಿ ಧೈರ್ಯ, ಆತ್ಮವಿಶ್ವಾಸಗಳನ್ನು ತುಂಬಿ ರಾಷ್ಟ್ರ ಸೇವೆಯ ಮನೋಭಾವನೆಯನ್ನುಂಟುಮಾಡುವುದೇ ಶ್ರೀರಾಮ ವಿದ್ಯಾಕೇಂದ್ರದ ಮುಖ್ಯ ಉದ್ದೇಶ ವಾಗಿದೆ ಎಂದರು.
ಕಲ್ಲಡ್ಕ ಶ್ರೀರಾಮ ಸೌಹಾರ್ದ ಸಹಕಾರಿ ಸಂಘ ನಿ.ದ ಅಧ್ಯಕ್ಷರಾದ ನಾರಾಯಣ ಶೆಟ್ಟಿ ಕುಲ್ಯಾರ್, ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಕಲ್ಲಡ್ಕ ಶಾಖೆಯ ಮ್ಯಾನೇಜರ್ ಗೋಪಾಲಕೃಷ್ಣ ಪ್ರಭು, ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಕರ್ಪೆ, ಭಾ.ಜ.ಪ.ದ ಯುವ ಮುಖಂಡ ವಿಕಾಸ್ ಕುಮಾರ್ ಪಿ.,
ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಉಪಪ್ರಾಂಶುಪಾಲ ಯತಿರಾಜ್ ಪೆರಾಜೆ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾಲೇಜಿನ ಪ್ರಾಚಾರ್ಯರಾದ ಕೃಷ್ಣ ಪ್ರಸಾದ್ ಕಾಯರ್ ಕಟ್ಟೆ ಪ್ರಸ್ತಾವನೆಗೈದು,ಸ್ವಾಗತಿಸಿದರು.
ವಿದ್ಯಾರ್ಥಿಗಳದಾ ಕು. ದಿವ್ಯ ಲಕ್ಷ್ಮೀ ವಂದಿಸಿದರು, ಕು.ಧನುಶ್ರೀ ಕಾರ್ಯಕ್ರಮ ನಿರ್ವಹಿಸಿದರು. ಲಿಖಿತ್ ನಾಯಕ್ ಪ್ರಾರ್ಥಿಸಿದರು



