ಸಜೀಪ: ಆಮಂತ್ರಣ ಪತ್ರ ಬಿಡುಗಡೆ
ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮಂಜಲ್ ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನ. 6 ರಂದು ನಡೆಯುವ ಲಕ್ಷ ದೀಪೋತ್ಸವ ಹಾಗೂ ದ. 19 ಕ್ಕೆ ಪ್ರತಿಷ್ಠಾ ದಿನಾಚರಣೆಯ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಬಿಡುಗಡೆಗೊಳಿಸಿದರು.

ಸಜೀಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ , ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ದೇವಿಪ್ರಸಾದ್ ಪೂಂಜಾ,ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜೀಪ ಮುನ್ನೂರು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರೀತ್ತಾಯ,ಪ್ರಗತಿಪರ ಕೃಷಿಕ ಶ್ರೀನಿವಾಸ ಭಟ್ ನಗ್ರಿ,ಮಾಗಣೆ ಕಾಂತಾಡಿ ಗುತ್ತು ಗಡಿ ಪ್ರಧಾನರಾದ ಗಣೇಶ ಶೆಟ್ಟಿ ಯಾನೆ ಉಗ್ಗಶೆಟ್ಟಿ, ಸಜೀಪಗುತ್ತು ಗಡಿ ಪ್ರದಾನರಾದ ಮುತ್ತಣ್ಣ ಶೆಟ್ಟಿ ಯಾನೆ ಕಾಳಪ್ಪ ಶೆಟ್ಟಿ,ಬಿಜಂದಾರು ಗುತ್ತು ಶಿವರಾಮ ಭಂಡಾರಿ, .ಡಾ. ಶಿವರಾಮ ಜೋಶಿ,ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ಕೃಷ್ಣ ಶ್ಯಾಮ್ .ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ ರಾಧಾಕೃಷ್ಣ ಆಳ್ವ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರವೀಣ್ ಆಳ್ವ,ಜಿ ರಾಮಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು
One attachment • Scanned by Gmail



