ಬಂಟ್ವಾಳ ಬಿಜೆಪಿಯಿಂದ ಬಿ ಎಲ್ ಎ -2 ಕಾರ್ಯಗಾರ”
ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿಶೇಷ ಮತದಾರರ ಪಟ್ಟಿಯ ಎಸ್ ಐ ಆರ್ ಮತಗಟ್ಟೆ “ಬಿ ಎಲ್ ಎ -2 ಕಾರ್ಯಗಾರ” ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಮಂಗಳವಾರ ನಡೆಯಿತು.

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಕಾರ್ಯಾಗಾರವನ್ನು ಉದ್ಘಾಟನೆ ಮಾತಾಡಿದರು.
ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಚೆನ್ನಪ್ಪ ಆರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮಂಗಳೂರು ಲೋಕಸಭಾ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟ ಅವರು ಮತಪಟ್ಡಿ ಪರಿಷ್ಕರಣೆಯ ಮಾಹಿತಿಯನ್ನು ನೀಡಿದರು.

ಮಂಡಲ ಪ್ರಭಾರಿಗಳಾದ ಪೂಜಾ ಪೈ, ಜಿಲ್ಲೆಯ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಮತದಾರ ಪಟ್ಟಿ ಪರಿಷ್ಕರಣೆಯ ಕ್ಷೇತ್ರದ ಸಂಚಾಲಕರಾದ ದೇವದಾಸ್ ಶೆಟ್ಟಿ ಬಂಟ್ವಾಳ, ಮಾಧವ ಮಾವೆ, ಜಯರಾಮ ರೈ ಬೋಳಂತೂರು ಭಾಗವಸಿದ್ದರು.
ಬಿಜೆಪಿ ಬಂಟ್ವಾಳ ಮಂಡಲದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಸ್ವಾಗತಿಸಿದರು.ಇನ್ನೋರ್ವ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ವಂದಿಸಿದರು. ಕ್ಷೇತ್ರ ಕಾರ್ಯದರ್ಶಿ ಹರೀಶ್ ಶೆಟ್ಟಿ ಪಡು ಕಾರ್ಯಕ್ರಮ ನಿರೂಪಿಸಿದರು
ಸಂಸದರಿಗೆ ಅಭಿನಂದನೆ:
ವಿಶ್ವ ಸಂಸ್ಥೆಯಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸಿ ಕರಾವಳಿ ಜೆಲ್ಲೆಯ ಮತದಾರರಿಗೆ ಹೆಮ್ಮೆಯನ್ನು ತಂದು ಕೊಟ್ಟ ಜಿಲ್ಲೆಯ ಸಂಸದರು ಹಾಗೂ ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಇದೇ ವೇಳೆ ಬಂಟ್ವಾಳ ಮಂಡಲ ಸಮಿತಿ ವತಿಯಿಂದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶಾಲು ಹೊದಿಸಿ ಅಭಿನಂದಿಸಿದರು.



