ಜೂಡೋ ಸ್ಪರ್ಧೆಯಲ್ಲಿ ತೃತೀಯ ಸ್ಥಾನ
ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಇದರ ಆಶ್ರಯದಲ್ಲಿ ಅ.೨೬ ರಿಂದ ೨೭ ರವೆರೆಗೆ ಬೆಂಗಳೂರಿನಲ್ಲಿ ನಡೆದ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ ೨೦೨೫-೨೬ರಲ್ಲಿ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬೆವಜೆರ್ ಲಿಂಗ್ ದೋದ್ ಜೂಡೋ ಸ್ಪರ್ಧೆಯಲ್ಲಿ ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಮೂಲತ ಮೇಘಾಲಯದ ನಿವಾಸಿಯಾಗಿರುವ ಬೆವಜೆರ್ ಲಿಂಗ್ ದೋದ್, ಟೀನಾ ಲಿಂಗ್ ದೋದ್ ಅವರ ಪುತ್ರ. ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ಮಾರ್ಷಲ್ ಆರ್ಟ್ ತರಬೇತಿ ಪಡೆಯುತ್ತಿದ್ದಾನೆ.



