ಬಂಟ್ವಾಳ: ಸ್ವತಂತ್ರ ಭಾರತವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ವಲ್ಲಭಾಯ್ ಪಟೇಲರ ಯೋಗದಾನ ಮಹತ್ತರವಾದುದು. ಉಕ್ಕಿನ ಮನುಷ್ಯನೆಂದೇ ಖ್ಯಾತರಾದ ಇವರು ಸ್ವತಂತ್ರ ಭಾರತದ ಮೊಟ್ಟಮೊದಲ ಗೃಹಮಂತ್ರಿಗಳಾಗಿ ದೇಶಕ್ಕೆ ನೀಡಿದ ಸೇವೆ ಅನುಪಮವಾದುದು. ಇವರನ್ನು ಇಂದಿನ ಯುವಜನತೆ ಆದರ್ಶವಾಗಿರಿಸಿಕೊಂಡು ಮುನ್ನಡೆಯಬೇಕು ಎಂದು ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ಪ್ರಾಂಶುಪಾಲರಾದ ಎಂ.ಡಿ. ಮಂಚಿ ನುಡಿದರು. 

 ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಐ.ಕ್ಯೂ.ಎ.ಸಿ. ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀ ಸೇವಾ ಯೋಜನಾ ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರೀ ಹೆಚ್.ವಿ. ನ ಏಕತಾ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು. 

 ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಿವಣ್ಣಪ್ರಭು, ಬಿ.ಆರ್.ಎಂ.ಪಿ.ಸಿ. ಶಾಲೆಯ ಕನ್ನಡ ಶಿಕ್ಷಕರಾದ ಮನೋಹರ ಎಸ್ ದೊಡಮನಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ‘ಏಕತಾ ನಡಿಗೆಯಲ್ಲಿ ಪಾಲ್ಗೊಂಡರು.  

By suddi9

Leave a Reply

Your email address will not be published. Required fields are marked *