ಪೌಷ್ಠಿಕ ಆಹಾರ ಸೇವೆನೆ ಆರೋಗ್ಯಕ್ಕೆ ಅತ್ಯಂತ ಅವಶ್ಯಕ: ಆಶಾಮಣಿ
ಬಂಟ್ವಾಳ: ಇಲ್ಲಿನ ಬಿ. ಮೂಡ ಗ್ರಾಮದ ಅಜ್ಜಿಬೆಟ್ಟು ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ನಡೆಯಿತು. ವಕೀಲೆ ಆಶಾಮಣಿ ಡಿ. ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪೌಷ್ಠಿಕ ಆಹಾರ ಸೇವೆನೆ ನಮ್ಮ ದೇಹದ ಆರೋಗ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ.

ಹಿಂದಿನ ಕಾಲದಲ್ಲಿ ಬಡತನವಿದ್ದರೂ ಮನೆ ಪರಿಸರದಲ್ಲೇ ಸಿಗುತ್ತಿದ್ದ ಸೊಪ್ಪು ತರಕಾರಿಗಳನ್ನು ಬಳಸಿ ಪೌಷ್ಟಿಕ ಆಹಾರಗಳನ್ನು ಸೇವೆನೆ ಮಾಡುತ್ತಿದ್ದುದರಿಂದ ನಮ್ಮ ಹಿರಿಯರು ಉತ್ತಮ ಆರೋಗ್ಯವನ್ನು ಹೊಂದಿದ್ದರು ಎಂದು ತಿಳಿಸಿದರು.ಜೆಸಿಐ ವಲಯ ತರಬೇತುದಾರ ಸಂದೀಪ್ ಸಾಲ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಜ್ಞಾನ ವಿಕಾಸ ಕೇಂದ್ರದ ಸಮನ್ವಯಧಿಕಾರಿ ಸವಿತಾ ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ಗಿರೀಶ್, ಒಕ್ಕೂಟದ ಅಧ್ಯಕ್ಷೆ ಸಂಧ್ಯಾ ಹೆಗ್ಡೆ, ಸೇವಾ ಪ್ರತಿನಿಧಿ ವನಜಾಕ್ಷಿ ಹಾಗೂ ಜ್ಞಾನವಿಕಾಸದ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.
ಸದಸ್ಯರು ತಾವು ಮನೆಯಲ್ಲಿ ತಯಾರಿಸಿ ತಂದ ವಿವಿಧ ಬಗೆಯ ಪೌಷ್ಠಿಕ ಆಹಾರದ ಸಹಭೋಜನ ನಡೆಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಿಸಲಾಯಿತು.



