ಕಲ್ಲಡ್ಕ ಶ್ರೀರಾಮ ಕಾವ್ಯ ಸಂಗಮ ಕಾರ್ಯಕ್ರಮ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆ ಪ್ರಯುಕ್ತ ಕಾವ್ಯ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಅತಿಥಿ ಅಭ್ಯಾಗತರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಶ್ರೀರಾಮ ವಿದ್ಯಾ ಕೇಂದ್ರದ ವಿವಿಧ ವಿಭಾಗದ ವಿದ್ಯಾರ್ಥಿಗಳು ಕವನ ವಾಚಿಸಿದರು.

ಅತಿಥಿಯಾಗಿದ್ದ ರಾಜ್ಯ ಪ್ರಶಸ್ತಿ ಪುರಸ್ಕೃತರು,ನಿವೃತ್ತ ಅಧ್ಯಾಪಕರಾದ ರಮೇಶ್ ಎಂ ಬಾಯಾರು ಮಾತನಾಡಿ ಸಾಹಿತ್ಯ , ಕಲೆ, ಸೇವೆ ಇವುಗಳು ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ವಿಕಾಸಗೊಳ್ಳಲು ಸಹಾಯಕವಾಗುವುದು. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಈ ರೀತಿಯ ಕಾರ್ಯಕ್ರಮವು ಪ್ರೇರಣೆಯಾಗುವುದು ಎಂದರು.
ಪ್ರಾಂಶುಪಾಲರಾದ ವಸಂತ್‌ಬಲ್ಲಾಳ್ ಉಪಸ್ಥಿತರಿದ್ದರು. ಪ್ರಥಮ ವಾಣಿಜ್ಯ ವಿಭಾಗದ ನಿನಾದ್ ಕಾರ್ಯಕ್ರಮವನ್ನು ನಿರೂಪಿಸಿದರು.



