ಬಂಟ್ವಾಳ :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ವಲಯದ  ವತಿಯಿಂದ ಬಂಟ್ವಾಳ ಎಸ್ ವಿ ಎಸ್ ದೇವಳ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವ   ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಶಾಲಾ ಮುಖ್ಯ ಶಿಕ್ಷಕಿ  ಸುರೇಖಾ ಕಾರ್ಯಕ್ರಮ ಉದ್ಘಾಟಿಸಿದರು.


ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಆರೋಗ್ಯ ಮೇಲ್ವಿಚಾರಕ  ಜಯರಾಮ್ ಪೂಜಾರಿಯವರು ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ಇಂದಿನ ಯುವಪೀಳಿಗೆಯ ಪಾತ್ರದ ಕುರಿತಾಗಿ ಮಾಹಿತಿ ನೀಡಿದರು

,ಜನಜಾಗೃತಿ ವೇದಿಕೆಯ ಸದಸ್ಯರಾದ ವಸಂತ ಮೂಲ್ಯ, ಮನಿಹಳ್ಳ ಒಕ್ಕೂಟದ ಅಧ್ಯಕ್ಷರಾದ ಪದ್ಮನಾಭ ಗೌಡ, ಸಹ ಶಿಕ್ಷಕ ದಾಮೋದರ್ ಪಡಿಯಾರ್,ವಲಯ ಮೇಲ್ವಿಚಾರಕ ರಾಜೇಶ್ ನಾಯ್ಕ್, ಸೇವಾಪ್ರತಿನಿಧಿ ಉಷಾ, ಉಪಸ್ಥಿತರಿದ್ದರು. 

By Suddi9

Leave a Reply

Your email address will not be published. Required fields are marked *