ಜಯಂತಿ, ಆಚರಣೆಗಳು ನಾಲ್ಕು ಗೋಡೆಗಳ ಮಧ್ಯೆ ನಡೆಯದಿರಲಿ: ಬೂಡಾ ಅಧ್ಯಕ್ಷ ಬೇಬಿಕುಂದರ್
ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಆಡಳಿತ ಸೌಧದ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಕಾರ್ಯಕ್ರಮ ಶನಿವಾರ ನಡೆಯಿತು.

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಯಾವುದೇ ಜಯಂತಿ, ಆಚರಣೆಗಳು ನಾಲ್ಕು ಗೋಡೆಗಳ ಮಧ್ಯೆ ನಡೆಯದೆ,ಸಾರ್ವಜನಿಕವಾಗಿ ನಡೆದಾಗ ಯುವ ಸಮುದಾಯಕ್ಕೆ ದಾರ್ಶನಿಕ ಪುರುಷರ ಜೀವನ ಚರಿತ್ರೆಯ ದರ್ಶನವಾಗಲಿದೆ ಎಂದು ತಿಳಿಸಿದರು.
ಕನಕದಾಸರು ಕೇವಲ ಶಕ್ತಿ ಮಾತ್ರವಲ್ಲ ಭಕ್ತಿಯ ವ್ಯಕ್ತಿಯಾಗಿ ನಮಗೆ ಮೇಲ್ಪಂಕ್ತಿಯಾಗಿದ್ದು, ಇಂತಹ ಮಹಾಪುರುಷರಿಗೆ ಗೌರವ ಸಿಗುವಂತೆ ಕಾರ್ಯಕ್ರಮಗಳು ನಡೆಯಬೇಕು ಎಂದರು.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಉಪಸ್ಥಿತರಿದ್ದರು.
ಉಪ ತಹಶಿಲ್ದಾರ್ ನವೀನ್ ಬೆಂಜನಪದವು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು, ಸಾರ್ವಜನಿಕರು ಉಪಸ್ಥಿತರಿದ್ದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ, ವಂದಿಸಿದರು.



