ಕಬಡ್ಡಿ ಪಂದ್ಯಾಟಕ್ಕೆ ತರುಣ್ ಜಿ ಎಸ್ ರಾಜ್ಯಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನಢಯಲೊರುವ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ತರುಣ್ ಕೃಷ್ಣ ಜಿ ಎಸ್ ಆಯ್ಕೆಯಾಗಿದ್ದಾನೆ.

ಈತ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.
ಇತ್ತೀಚೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆ ಇದರ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರಗಿದ ಕರ್ನಾಟಕ ಮಿನಿ ಒಲಿಂಪಿಕ್ಸ್ – 2025 ರ ಕಬಡ್ಡಿ ವಿಭಾಗದ ರಾಜ್ಯಮಟ್ಟದ ಸ್ಪರ್ಧೆಯಲ್ಲೂ ದಕ್ಷಿಣ ಕನ್ನಡ ತಂಡದ ನಾಯಕನಾಗಿದ್ದ.
.ಈತ ಬಂಟ್ವಾಳ ತಾಲೂಕಿನ ನಾರ್ಶ ಮೈದಾನ ಪ್ರೌಢಶಾಲಾ ಮುಖ್ಯಶಿಕ್ಷಕರಾದ ಗೋಪಾಲಕೃಷ್ಣ ನೇರಳಕಟ್ಟೆ ಮತ್ತು ಸುರಿಬೈಲು ಪ್ರೌಢಶಾಲಾ ಶಿಕ್ಷಕಿ ಸ್ವಪ್ನ ದಂಪತಿ ಪುತ್ರನಾಗಿದ್ದಾನೆ.



