ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತಕ್ಕೆ ಆಯ್ಕೆ: ಅಭಿನಂದನೆ
ಬಂಟ್ವಾಳ :ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತ ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಚುನಾಯಿತರಾದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೇರು ಅವರನ್ನು ಸಿದ್ದಕಟ್ಟೆ ಪ್ರಾಥಮಿಕ ಸಹಕಾರ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರರಾದ ಪ್ರಭಾಕರ ಪ್ರಭು, ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರುಗಳಾದ ಸತೀಶ್ ಪೂಜಾರಿ ಅಲಕ್ಕೆ,ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ,ವಿಶ್ವನಾಥ ಶೆಟ್ಟಿಗಾರ್, ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ , ಪುಷ್ಪಲತಾ ಎಸ್. ಆರ್, ,ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ, ನವೀನ ಹೆಗ್ಡೆ ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಸ್ವಾಗತಿಸಿದರು.
ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿ ನಿರ್ದೇಶಕಿ ಮಂದಾರತಿ ಎಸ್ ಶೆಟ್ಟಿ ವಂದಿಸಿದರು.



