ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಸಂಸ್ಕಾರಯುತ ಶಿಕ್ಷಣ : ವಕೀಲ ಶ್ರೀರಾಮ ಪ್ರಭು
ಬಂಟ್ವಾಳ: ಕಲ್ಕಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮ ಮತ್ತು ವೀರ ರಾಣಿ ಅಬ್ಬಕ್ಕ ೫೦೦ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆಪ್ರತಿಭಾ ಅನ್ವೇಷಣೆ ಕಾರ್ಯಕ್ರಮ ಬುಧವಾರ ನಡೆಸಲಾಯಿತು.

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಹಿರಿಯ ವಿದ್ಯಾರ್ಥಿ,ನ್ಯಾಯವಾದಿ ಶ್ರೀರಾಮ ಪ್ರಭು ಅವರು ಭತ್ತದ ಕಲಶದಲ್ಲಿ ಹಿಂಗಾರವನ್ನು ಅರಳಿಸಿ, ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸದಾ ಉಪಯೋಗಿಸಿಕೊಳ್ಳಬೇಕು.
ಆತ್ಮವಿಶ್ವಾಸ , ಧೈರ್ಯ, ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿರುವ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಶಿಕ್ಷಣ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಯು ಮುಂದೆ ಜೀವನದಲ್ಲಿ ಯಶಸ್ಸನ್ನು ಗಳಿಸುತ್ತಾನೆ ಎಂದರು.
ಶ್ರೀರಾಮ ವಿದ್ಯಾ ಕೇಂದ್ರದ ಸಂಚಾಲಕರಾದ ಶ್ರೀಯುತ ವಸಂತ ಮಾಧವ ಅವರು ರಾಣಿ ಅಬ್ಬಕ್ಕನ ಜೀವನ ಸಾಧನೆಗಳನ್ನು ನೆನಪಿಸಿಕೊಂಡರು. ಶ್ರೀರಾಮ ವಿದ್ಯಾ ಕೇಂದ್ರದ ಆಡಳಿತ ಮಂಡಳಿ ಸದಸ್ಯ ನಾಗೇಶ್ ಕಲ್ಲಡ್ಕ ಮಾತನಾಡಿ ಒಬ್ಬ ವ್ಯಕ್ತಿಗೆ ಕುಟುಂಬ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಕಾರಯುತ ಶಿಕ್ಷಣ ಸಿಗುವುದು ಮುಖ್ಯವಾಗಿದೆ. ಅದನ್ನು ಶ್ರೀರಾಮ ವಿದ್ಯಾಕೇಂದ್ರವು ಮಾಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀ ವಸಂತ ಬಲ್ಲಾಳ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕು.ಶ್ರೇಯಾ ಸ್ವಾಗತಿಸಿ ಕು.ಧನ್ಯಾ ವಂದಿಸಿದರು ಕು. ಕೀರ್ತನ ಕಾರ್ಯಕ್ರಮ ವನ್ನು ನಿರೂಪಿಸಿದರು.



