ಬಂಟ್ವಾಳ : ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯಲ್ಲಿರುವ ತಾತ್ಕಾಲಿಕ ಪಂಪು ಚಾಲಕರ ತುರ್ತು ಸಭೆ ಪಂಚಾಯತ್ ಅಧ್ಯಕ್ಷೆ ಲಲಿತ ಅವರ ಅಧ್ಯಕ್ಷತೆಯಲ್ಲಿ ಶನಿವಾರ  ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.


ಪಂಪ್ ಚಾಲಕರನ್ನು ಉದ್ದೇಶಿಸಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ ಶರ್ಮಾ ಅವರು ಮಾತನಾಡಿ, ಈಗಾಗಲೇ ಮಳೆಗಾಲ ಮುಗಿದಿರುವುದರಿಂದ ಮುಂದಿನ ದಿನಗಳಲ್ಲಿ  ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ  ಕಂಡು ಬರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಯಾವುದೇ ಕಾರಣಕ್ಕು ನೀರಿನ ಸಮಸ್ಯೆ ಉಂಟಾಗದಂತೆ   ಬೇಕಾದ ವ್ಯವಸ್ಥೆಯನ್ನು ಕಲ್ಪಿಸಿಕೊಂಡು ಎಚ್ಚರಿಕೆ ವಹಿಸುವಂತೆ ಸೂಚಿಸಿದರು.


ಗ್ರಾಮದ ನಾಲ್ಕು ವಾರ್ಡ್ ಗಳಲ್ಲು ಪಂಪು ಚಾಲಕರು  ತಮ್ಮ ತಮ್ಮ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿದ್ದರೆ ಈಗಿಂದೀಗಲೇ ಗ್ರಾಮ ಪಂಚಾಯತಿನ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು, ಸರಿಯಾದ ಸಮಯಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಗ್ರಾಮಸ್ಥರಿಗೆ ತಲುಪುವಂತೆ ಮಾಡಲು ಸಹಕರಿಸಬೇಕು,ಈ ಕಾರ್ಯದಲ್ಲಿ ಅಸಡ್ಡೆ ತೋರಿಸುವರನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಿ ಬದಲಿ ವ್ಯವಸ್ಥೆ ಮಾಡಲಾಗುವುದು ಎಂದರು.

ಸಭೆಯಲ್ಲಿಗ್ರಾಮ ಪಂಚಾಯತ್ ಉಪಾಧ್ಯಕ್ಷ  ಜನಾರ್ಧನ ಪೂಜಾರಿ, ಪಂಚಾಯತ್ ಸದಸ್ಯರುಗಳಾದ ದಿನೇಶ್ ಪೂಜಾರಿ, ಸಂದೀಪ್ ಪೂಜಾರಿ,  ಜಯಪ್ರಸಾದ್, ನಿಶಾಂತ್ ರೈ, ಅಬ್ದುಲ್ ರೆಹಿಮಾನ್,,ಜಯಂತಿ, ಗೀತಾ ಗಾಂಭೀರ್  ಮೀನಾಕ್ಷಿ, ಉಮಾವತಿ,   ದ್ವಿತೀಯ ದರ್ಜೆ ಲೆಕ್ಕ ಸಹಾಯಕ ನವೀನ್ ರಾಬರ್ಟ್, ಚಂದ್ರಹಾಸ್, ಮಿಥುನ್, ಮೊದಲಾದವರು  ಉಪಸ್ಥಿತರಿದ್ದರು. 

By Suddi9

Leave a Reply

Your email address will not be published. Required fields are marked *