ಬಂಟ್ವಾಳ: ವಿದ್ಯಾರ್ಥಿಗಳು ಯೋಜನಾಬದ್ಧವಾಗಿ ಅಧ್ಯಯನ ಮಾಡಿದರೆ ತಮ್ಮ ಪಠ್ಯದೊಂದಿಗೆ ವಿವಿಧ ಕಲೆಗಳಲ್ಲಿಯೂ ಮುಂದುವರೆಯುವುದು ಸಾಧ್ಯವಾಗುತ್ತದೆ. ಮಕ್ಕಳಿಗೆ ಮೊಬೈಲ್ ಬಳಕೆಯ ಗೀಳು ಹೆಚ್ಚುತ್ತಿದ್ದು ಇದಕ್ಕೆ ಪೋಷಕರೂ ಕೂಡ ಪರೋಕ್ಷವಾಗಿ ಕಾರಣರಾಗುತ್ತಿದ್ದಾರೆ ಎಂದು ನಿವೃತ್ತ  ಪ್ರಾಧ್ಯಾಪಕ ಪ್ರೊ.ಟಿ.ಪ್ರಕಾಶ್ ಪ್ರಭು ನುಡಿದರು. 

 ಬಂಟ್ವಾಳ ವಿದ್ಯಾಗಿರಿಯ ಶ್ರೀ ವೆಂಕಟರಮಣಸ್ವಾಮೀ ಇಂಗ್ಲೀಷ್ ಮೀಡಿಯಂ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು  ಉದ್ಘಾಟಿಸಿ ಅವರು  ಮಾತನಾಡಿದರು.ಎಸ್.ವಿ.ಎಸ್.ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕಿ  ಕೆ ರೇಖಾ ಶೆಣೈ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವಿದ್ಯಾರ್ಥಿನಾಯಕ ತನೀಶ್ ಆರ್ ಶೆಟ್ಟಿಗಾರ್ ಉಪಸ್ಥಿತರಿದ್ದರು. 

ಇದೇ ವೇಳೆ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

 ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ  ಹರಿಪ್ರಸಾದ್ ಶಾಲಾ ವಾರ್ಷಿಕವರದಿ ವಾಚಿಸಿದರು.  ಶರ್ಮಿಳಾ ಅತಿಥಿಗಳನ್ನು ಪರಿಚಯಿಸಿದರು. ಗೌತಮಿ ಬಹುಮಾನ ಪಟ್ಟಿ ವಾಚಿಸಿದರು.  ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ  ಚೈತ್ರಾ ಶೆಟ್ಟಿ ಸ್ವಾಗತಿಸಿದರು, ಪೂರ್ವಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ  ವೀಣಾ ದೇವಾಡಿಗ ವಂದಿಸಿದರು. 

ಶಾನ್ ಸಜಿತ್ ಹಾಗೂ ಅನನ್ಯ ಪಿ ಭಟ್ ಕಾರ್ಯಕ್ರಮ ನಿರೂಪಿಸಿದರು.ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

By Suddi9

Leave a Reply

Your email address will not be published. Required fields are marked *