ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದಿಂದ ರಾಷ್ಟ್ರೀಯ ಸಂವಿಧಾನ ದಿನಾಚರಣೆ ಆಚರಿಸಲಾಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯುವ ಬಿಜೆಪಿ ಮುಖಂಡ ವಿಕಾಸ್ ಕುಮಾರ್ ಪಿ. ಇವರು ಸಂವಿಧಾನದ ಮೂಲ, ವಿಕಾಸ, ಬೆಳವಣಿಗೆಯೊಂದಿಗೆ ಸಂವಿಧಾನದ ಅನುಚ್ಛೆದ ತಿದ್ದುಪಡಿ ಮತ್ತು ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್‌ರ ಪಾತ್ರವನ್ನು ವಿವರಿಸಿದರು.

ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ, ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಜಯಲಕ್ಷ್ಮಿ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕರಾದ ಅಕ್ಷತಾ ಮಾತಾಜಿ ಉಪಸ್ಥಿತರಿದ್ದರು. ಈ ಸಂದರ್ಭ ಸಂವಿಧಾನ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.

ವಿದ್ಯಾರ್ಥಿಗಳಾದ ಅಕ್ಷಯ್ ನರಸಿಂಹ ಸ್ವಾಗತಿಸಿ, ಕವನ ವಂದಿಸಿದರು, ಚೈತನ್ಯ ಕಾರ್ಯಕ್ರಮ ನಿರೂಪಿಸಿದರು
