ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್‌ನ ವಾರ್ಷಿಕೋತ್ಸವ
ಬಂಟ್ವಾಳ : ಬಾಳಿನಲ್ಲಿ ಬರುವ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಲು ಪೋಷಕರು ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ಮಕ್ಕಳು ಅದನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ಮಂಗಳೂರಿನ ಎನ್.ಸಿ.ಸಿ. ಕಮಾಂಡಿಂಗ್ ಆಫೀಸರ್ ಲೆ ಕರ್ನಲ್ ರೋಹಿತ್ ಪ್ರಕಾಶ್ ರೈ ಹೇಳಿದರು. ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್‌ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಎಸ್.ವಿ.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ ರೇಖಾ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರಾದ ಪೂರ್ಣೇಶ್ವರಿ ಭಟ್ ಕೆ ಅವರು ಶಾಲಾ ವಾರ್ಷಿಕ ವರದಿ ವಾಚಿಸಿದರು. ಶಾಲಾ ಸಂಯೋಜನಾಧಿಕಾರಿಯಾದ ಜೂಲಿಯಾನ ಡಿ’ಸೋಜ ವೇದಿಕೆಯಲ್ಲಿದ್ದರು. ಅನಿತಾ ಡಿ’ಸೋಜ ಅತಿಥಿಗಳನ್ನು ಪರಿಚಯಿಸಿದರು. ದಿವ್ಯ ಮತ್ತು ಮರಿಯಾ ರೊಲಿಟಾ ಡಿ’ಸೋಜ ಬಹುಮಾನಿತರ ಪಟ್ಟಿ ವಾಚಿಸಿದರು.
ಮನೋಹರ ಎಸ್ ದೊಡ್ಡಮನಿ ಸ್ವಾಗತಿಸಿ, ಶುಭಲತಾ ವಂದಿಸಿದರು. ಅನನ್ಯ ಮತ್ತು ಸಂಗಡಿಗರು ಪ್ರಾರ್ಥಿಸಿ, ವಿವಾನ್ ಮೆಲ್ರಿಕ್ ಮೆನೆಜಸ್ ಹಾಗೂ ಧೃತಿ ಎಚ್ ಕಾರ್ಯಕ್ರಮ ನಿರೂಪಿಸಿದರು. ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.



