ಬಂಟ್ವಾಳ: ಭಾರತದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಸಂವಿಧಾನದ ಆಶಯಗಳ ಅರಿವಿರಬೇಕು. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆಗೆ ಸಂವಿಧಾನದ ಮೂಲ ಆಶಯಗಳನ್ನು ಅಧ್ಯಯನ ಮಾಡಬೇಕು ಎಂದು ಬಂಟ್ವಾಳ ಎಸ್ ವಿ ಎಸ್ ಕಾಲೇಜಿನ ಪ್ರಾಂಶುಪಾಲರಾದ ಎಂ.ಡಿ.ಮಂಚಿ ಹೇಳಿದರು. 

 ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ಸಂವಿಧಾನ ದಿನಾಚರಣರೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. 

ವೇದಿಕೆಯಲ್ಲಿ ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಶಿವಣ್ಣಪ್ರಭು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥಶಾಸ್ತ್ರೀ ಸ್ವಾಗತಿಸಿದರು. ಕೊನೆಯಲ್ಲಿ ಸಂವಿಧಾನದ ಪೀಠಿಕೆಯನ್ನು ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಬೋಧಿಸುವುದರೊಂದಿಗೆ ಸಂವಿಧಾನ ದಿನದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. 

By Suddi9

Leave a Reply

Your email address will not be published. Required fields are marked *