Published On: Sat, Nov 29th, 2025

 ರಾಜ್ಯಮಟ್ಟದ ಬಾಕ್ಸಿಂಗ್ ನಲ್ಲಿ ಬೆನಝೀರ್ ಗೆ ಕಂಚಿನ ಪದಕ

ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಇದರ ಆಶ್ರಯದಲ್ಲಿ ನ.27 ಮತ್ತು 28 ರಂದು ಶಿವಮೊಗ್ಗದಲ್ಲಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯೂಸಿ ವಿದ್ಯಾರ್ಥಿ  ಬೆನಝೀರ್ ಲಿಂಗ್ ದೋದ್   ಬಾಕ್ಸಿಂಗ್ ನಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾನೆ.

 ಈತ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ಮಾರ್ಷಲ್ ಆರ್ಟ್ ತರಬೇತಿ ಪಡೆಯುತ್ತಿದ್ದಾನೆ. ರಾಜೇಶ್ ಬ್ರಹ್ಮರಕೂಟ್ಲು ಅವರು ನೆತ್ತರಕೆರೆ ಸರಕಾರಿ ಶಾಲೆಯಲ್ಲಿ ಕರಾಟೆ, ಜೂಡೋ, ಕಲರಿ, ಸಿಲಂಬಂ, ಬಾಕ್ಸಿಂಗ್, ಸ್ಕೇಟಿಂಗ್ ಮೊದಲಾದ ಮಾರ್ಷಲ್ ಆರ್ಟ್ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದಾರೆ. ಬೆನಝೀರ್ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಜೂಡೋ ಸ್ಪರ್ಧೆಯಲ್ಲೂ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾನೆ

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter