ಸಮಾಜದ ಚಿಂತನೆಗೆ ಹೊಸ ದಿಕ್ಕು ನೀಡಿದ ಯುವವಾಹಿನಿ : ಲಕ್ಷ್ಮಣ ಶಾಂತಿ
ಬಂಟ್ವಾಳ : “ಸಮಾಜದ ಚಿಂತನೆಗೆ ಹೊಸ ದಿಕ್ಕು ನೀಡಿದ ಯುವವಾಹಿನಿ, ಯುವಶಕ್ತಿಯನ್ನು ರಚನಾತ್ಮಕ ಕಾರ್ಯಗಳಿಗೆ ಒಗ್ಗೂಡಿಸಿ, ಬ್ರಹ್ಮಶ್ರೀ ನಾರಾಯಣಗುರುಗಳ ಸಮಾನತೆ, ಶಿಕ್ಷಣ ಮತ್ತು ಮಾನವತೆಯ ಸಂದೇಶವನ್ನು ಮನೆ ಮನೆಗಳಿಗೆ ತಲುಪಿಸುವ ಪ್ರಯತ್ನವನ್ನು ಮುಂದುವರಿಸುತ್ತಿರುವುದು ಶ್ಲಾಘನೀಯವಾಗಿದೆ.”ಎಂದು ಕುದ್ರೋಳಿ ಗೋಕರ್ಣ ಕ್ಷೇತ್ರದ ಪ್ರಧಾನ ತಂತ್ರಿ ಲಕ್ಷಣ್ ಶಾಂತಿ ತಿಳಿಸಿದರು

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅರ್ಚಕರಾದ ನವೀನ್ ಶಾಂತಿ ಮಣಿನಾಲ್ಕೂರು ಕೊಕಲ ಗುತ್ತು ಅವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 62 ನೇ ಮಾಲಿಕೆಯಲ್ಲಿ ಅವರು ಗುರುಸಂದೇಶ ನೀಡಿದರು.

ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಿಂದ ಭಜನಾ ಸಂಕೀರ್ತನೆ ನಡೆಯಿತು,ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಪ್ರಧಾನ ತoತ್ರಿ ಲಕ್ಷ್ಮಣ್ ಶಾಂತಿ ನೇತೃತ್ವದಲ್ಲಿ ಗುರುಪೂಜೆ ನಡೆಯಿತು,
ಈ ಸಂದರ್ಭದಲ್ಲಿ ಸಾಯಿ ಶಾಂತಿ ಕೋಕಲ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅರ್ಚಕರಾದ ಪ್ರವೀಣ್ ಶಾಂತಿ, ನವೀನ್ ಶಾಂತಿ ಅಡ್ಯಾಲ್ ,ಪುರುಷೋತ್ತಮ ಶಾಂತಿ, ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಮಧುಸೂದನ್ ಮಧ್ವಾಚಾರ್ಯರ, ನಿರ್ದೇಶಕ ಮಹೇಶ್ ಬೊಳ್ಳಾಯಿ, ಪ್ರಜಿತ್ ಅಮಿನ್ ಏರಮಲೆ, ಸಂಘಟನಾ ಕಾರ್ಯದರ್ಶಿ ಯಶೋಧರ ಕಡಂಬಳಿಕೆ, ಸದಸ್ಯರಾದ ಪ್ರಶಾಂತ್ ಅಮೀನ್ ಏರಮಲೆ, ವಿಘ್ನೇಶ್ ಬೊಳ್ಳಾಯಿ ನವೀನ್ ಕುಡ್ಮೇರು, ಯತೀಶ್ ಬೊಳ್ಳಾಯಿ. ಹರಿಣಾಕ್ಷಿ ನಾವೂರು ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ, ಅರುಣ್ ಕುಮಾರ್, ನಾಗೇಶ್ ಪೊನ್ನೋಡಿ, ಮತ್ತಿತರರು ಉಪಸ್ಥಿತರಿದ್ದರು
ಸಂಗೀತದಲ್ಲಿ ಸಾತ್ವಿಕ್ ದೇರಾಜೆ, ಕಾರ್ತಿಕ್ ದೇರಾಜೆ ಸಹಕರಿಸಿದರು ಯುವವಾಹಿನಿ ಬಂಟ್ವಾಳಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ನೈಬೆಲು ಸ್ವಾಗತಿಸಿದರು, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲ್ಯಾನ್ ಅಜೆಕಲ ವಂದಿಸಿದರು.



