ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಜೀಪದಲ್ಲಿ ಎನ್ ಎಸ್ ಎಸ್ ಶಿಬಿರ
ಬಂಟ್ವಾಳ :ಇಲ್ಲಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಜಿಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಸಜಿಪ ಮೂಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಶೆಟ್ಟಿ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿಸುವಲ್ಲಿ ಸಹಕಾರಿಯಾಗಿದೆ. ಸೇವೆಯ ಮೂಲಕ ಶಿಸ್ತು, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವ ಅವಕಾಶವನ್ನು ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ನೀಡುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳಸರಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ನರಸಿಂಹ ಭಟ್ ಎಚ್ ಅವರು ಮಾತನಾಡಿ, ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಸಾಧ್ಯವಾಗುತ್ತದೆ. ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ನೆರವಾಗುತ್ತದೆ ಎಂದರು.
ಗ್ರಾಮ ಪಂಚಾಯಿತ್ ಸದಸ್ಯ ವಿಶ್ವನಾಥ ಬೆಳ್ಚಡ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯ ಪ್ರಕಾಶ್ ಪೆರ್ವ, ಪ್ರಾಂಶುಪಾಲ ಡಾ. ಜೈರಾಬಿ, ಉಪಾಪ್ರಾಂಶುಪಾಲರಾದ ಜ್ಯೋತಿ ಕುಮಾರಿ, ಯಾಂತ್ರಿಕ ವಿಭಾಗದ ವಿಭಾಗಾಧಿಕಾರಿ ಭಾಗವನ್ ಪ್ರಸಾದ್, ಕಾಮಗಾರಿ ವಿಭಾಗದ ವಿಭಾಗಾಧಿಕಾರಿ ಮೋಹನ್ ರಾಜ್ ಜಿ.ಎಸ್., ಕಂಪ್ಯೂಟರ್ ಸೈನ್ಸ್ ವಿಭಾಗದ ವಿಭಾಗಾಧಿಕಾರಿ ಭುವನೇಶ್ವರಿ, ವಿದ್ಯುನ್ಮಾನ ಮತ್ತು ಸಂವಹನ ವಿಭಾಗಾಧಿಕಾರಿ ಪ್ರವೀಣ್ ವಿ.ಡಿ. ಹಾಗೂ ಎನ್ ಎಸ್ ಎಸ್ ಘಟಕದ ನಾಯಕಿ ಸಿಂಚನ್ ಉಪಸ್ಥಿತರಿದ್ದರು.
ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಭಾಸ್ಕರ್ ಎಲ್ ಪ್ರಸ್ತಾವಿಸಿ, ಸ್ವಾಗತಿಸಿದರು. ಜಯಂತ್ ವಂದಿಸಿದರು, ದೀಕ್ಷಿತ್ ಕಾರ್ಯಕ್ರಮ ನಿರೂಪಿಸಿದರು.



