ಸೆರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಬಂಟ್ವಾಳ: ಕೊಳ್ನಾಡು ಗ್ರಾಮದ ಸೆರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ಮಧ್ಯಾಹ್ನ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜಿ.ಪಂ.ಮಾಜಿ ಸದಸ್ಯ ಎಂ.ಎಸ್. ಮಹಮ್ಮದ್ ಉದ್ಘಾಟಿಸಿದರು.

ಸರ್ಕಾರಿ ಶಾಲೆಗಳಿಗೆ ಸರಕಾರದಿಂದ ವಿಶೇಷ ಸವಲತ್ತುಗಳು ದೊರೆಯುತ್ತಿದ್ದು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸ ಬೇಕೆಂದರು. ಕೊಳ್ನಾಡು ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಅಸ್ಮಾ ಹಸೈನಾರ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಕೀರ್ತಿ. ಕೆ ಮತ್ತು ನಿವೃತ್ತಿ ಹೊಂದಿದ ಅಕ್ಷರ ದಾಸೋಹದ ಮುಖ್ಯ ಅಡುಗೆಯವರಾದ ಜಾನಕಿಯವರನ್ನು ಸನ್ಮಾನಿಸಲಾಯಿತು. ಕಲಿಕೆಯಲ್ಲಿ ಮತ್ತು ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಪೋಷಕರಿಗೆ ಮತ್ತು ಹಿರಿಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರ ಒಕ್ಕೂಟದ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಪಂಚಾಯತಿ ಸದಸ್ಯರಾದ ನೆಬಿಸ, ಜಯಂತಿ, ಅಬ್ದುಲ್ ರಝಾಕ್ ಸಿ.ಎಚ್., ಪಿಡಬ್ಲ್ಯುಡಿ ಗುತ್ತಿಗೆದಾರ ಬಾಲಕೃಷ್ಣ ಸೆರ್ಕಳ, ಅಶ್ರಫ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಆರಿಫ್, ತಾಲೂಕು ಪಂಚಾಯತಿ ಮಾಜಿ ಸದಸ್ಯ ಕುಲ್ಯಾರು ನಾರಾಯಣಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಅಶ್ರಫ್, ಉಪಾಧ್ಯಕ್ಷೆ ಶ್ರೀಲತಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ದಾಮೋದರ ಏರ್ಯ ಸ್ವಾಗತಿಸಿದರು. ಶಿಕ್ಷಕಿಯರಾದ ಸವಿತಾ ವರದಿ ವಾಚಿಸಿದರು. ಉಮಾ ಜಿ. ಬಿ. ಸನ್ಮಾನಿತರ ಪರಿಚಯ ಮಾಡಿದರು. ಗಾಯತ್ರಿ ಬಹುಮಾನಿತರ ಪಟ್ಟಿ ವಾಚಿಸಿದರು. ಗೋವಿಂದ ಎಂ.ಎಸ್ ಕಾರ್ಯಕ್ರಮ ನಿರೂಪಿಸಿದರು. ತದನಂತರ ಅಂಗನವಾಡಿ ಮತ್ತು ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಬೆಳಗ್ಗೆ ಶಾಲಾ ಗೋಡೆಗೆ ವರ್ಲಿ ಚಿತ್ತಾರಕ್ಕೆ ಚಾಲನೆ ನೀಡಲಾಯಿತು. ಬಳಿಕ ಜೆಸಿಐ ವಲಯ ತರಬೇತುದಾರ ಸಂದೀಪ್ ಸಾಲ್ಯಾನ್ ಮಕ್ಕಳಿಗೆ ಆಟ-ಪಾಠದ ಕಾರ್ಯಗಾರ, ನಾರ್ಶ ಮೈದಾನ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ ಮಕ್ಕಳ ಗೀತ ಗಾಯನವನ್ನು ನಡೆಸಿಕೊಟ್ಟರು.



