ಬಂಟ್ವಾಳ : ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಆಲಿ ವಿಟ್ಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾರ್ಗದರ್ಶನದಲ್ಲಿ ಮಂಗಳವಾರ ಚುನಾವಣಾ ಪ್ರಕ್ರಿಯೆಗಳು ನಡೆದಿದ್ದು, ಚುನಾವಣಾಧಿಕಾರಿ ಸುರೇಶ ಡಿ ಪಳ್ಳಿಯವರು ಅವಿರೋಧವಾಗಿ ಆಯ್ಕೆಯಾದ ನೂತನ ಆಡಳಿತ ಮಂಡಳಿಯನ್ನು ಘೋಷಿಸಿದರು.
ಸಂಘದ ಅಧ್ಯಕ್ಷ ಸಹಿತ ಐದು ಪದಾಧಿಕಾರಿಗಳ ಸ್ಥಾನ, ಐದು ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಗಳಿಗೆ ಬುಧವಾರ ಚುನಾವಣೆ ನಡೆದಿದ್ದು, ಅಧ್ಯಕ್ಷರ ಸಹಿತ ಎಲ್ಲಾ ಹತ್ತು ಮಂದಿ ಅವಿರೋಧ ಆಯ್ಕೆ ಎಂದು ಘೋಷಿಸಲಾಯಿತು.
ಉಪಾದ್ಯಕ್ಷರಾಗಿ ರಮೇಶ್ ಕೆ. ಪುಣಚ, ಕಾರ್ಯದರ್ಶಿಯಾಗಿ ಅಬ್ದುಲ್ ರಹಿಮಾನ್ ಟಿ.,
ಕೋಶಾಧಿಕಾರಿಯಾಗಿ ಚಂದ್ರ ಶೇಖರ ಕಲ್ಮಲೆ ಆಯ್ಕೆಯಾಗಿದ್ದಾರೆ.
ಕಾರ್ಯಕಾರಿ ಸಮಿತಿಗೆ ವೆಂಕಟೇಶ್ ಬಂಟ್ವಾಳ, ರತ್ನದೇವ್ ಪುಂಜಾಲಕಟ್ಟೆ, ಉದಯಶಂಕರ ನೀರ್ಪಾಜೆ, ವಾಮನ ಪೂಜಾರಿ ಪೊಳಲಿ ಹಾಗೂ ಮೌನೇಶ ವಿಶ್ವಕರ್ಮ ಆಯ್ಕೆಯಾದರು. ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು,ಸಮಿತಿ ಸದಸ್ಯರನ್ನು ಜಿಲ್ಲಾ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್. ಅಭಿನಂದಿಸಿದರು.
ಈ ಸಂದರ್ಭ ಚುನಾವಣಾಧಿಕಾರಿ ಸುರೇಶ್ ಡಿ ಪಳ್ಳಿ, ಸಹಾಯಕ ಚುನಾವಣಾಧಿಕಾರಿ ಜಯಶ್ರೀ ನವೀನ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಸಂದೀಪ್ ಸಾಲ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಸದಸ್ಯರು ಹಾಜರಿದ್ದರು.
