ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿ ಕ್ಲಬ್ ಬಂಟ್ವಾಳ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತುಂಬೆ ವಲಯ ಇದರ ಜಂಟಿ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು, ವೆನ್ಲಾಕ್ ಸಕರ್ಾರಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ 71ನೇ ರಕ್ತದಾನ ಶಿಬಿರ ಮಂಗಳವಾರ ನಡೆಯಿತು.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ರಕ್ಷಿತ್ ಎ.ಕೆ. ಹಾಗೂ ಪುದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಂ.ಮಹಮ್ಮದ್ ಶರೀಫ್ ಸ್ವತಃ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಸೇವಾಂಜಲಿ ಪ್ರತಿಷ್ಠಾನ ನಿರಂತರವಾಗಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ಶಿಬಿರ ನಡೆಸಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದು ಎಸೈ ರಕ್ಷಿತ್ ತಿಳಿಸಿದರು.

rakta dana
ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಕಾರಂತ, ಪಂಚಾಯತ್ ರಾಜ್ ಇಂಜಿನಿಯರ್ ರವಿಚಂದ್ರ, ಸಾಮಾಜಿಕ ಕಾರ್ಯಕತರ್ೆ ಗುಲಾಬಿ ರಕ್ತದಾನ ಮಾಡುವ ಮೂಲಕ ವಿಶೇಷವಾಗಿ ಗಮನ ಸೆಳೆದರು. ರೋಟರಿ ಕ್ಲಬ್ ಕಾರ್ಯದಶರ್ಿ ಸಂಜೀವ ಪೂಜಾರಿ, ಕೋಶಾಧಿಕಾರಿ ಕೆ.ಎನ್.ಹೆಗ್ಡೆ, ಕೆಎಂಸಿ ಆಸ್ಪತ್ರೆಯ ಡಾ. ಸ್ಮಿತಾ, ಪುದು ಗ್ರಾಮ ಪಂಚಾಯತ್ ಸದಸ್ಯ ಎಂ.ಕೆ.ಖಾದರ್, ಮಾಜಿ ಸದಸ್ಯ ಕ್ಲಾರಿ ಸಲ್ದಾನ, ಪ್ರಮುಖರಾದ ಭಾಸ್ಕರ ಚೌಟ, ಪ್ರಕಾಶ್ ಕೆ. ಫರಂಗಿಪೇಟೆ, ಪ್ರಕಾಶ್ ಶೆಟ್ಟಿ ತುಂಬೆ, ನ್ಯಾಯವಾದಿ ಅರುಣ್ ರೋಷನ್, ರಶೀದ್ ಮತ್ತಿತರರು ಹಾಜರಿದ್ದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜಾ ಸ್ವಾಗತಿಸಿ, ವಂದಿಸಿದರು. ಶಿಬಿರದಲ್ಲಿ 90 ಯುನಿಟ್ ರಕ್ತ ಸಂಗ್ರಹಿಸಲಾಯಿತು.
ಚಿತ್ರ: ಬಂಟ್ವಾಳ ಗ್ರಾಮಾಂತರ ಠಾಣಾ ಎಸೈ ರಕ್ಷಿತ್, ಪುದು ಗ್ರಾ.ಪಂ.ಉಪಾಧ್ಯಕ್ಷ ಮಹಮ್ಮದ್ ಶರೀಫ್ ರಕ್ತದಾನ ಮಾಡುವ ಮೂಲಕ 71ನೇ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.

By Suddi9

Leave a Reply

Your email address will not be published. Required fields are marked *