ಲಖ್ನೌ : ‘ಉತ್ತರ ಪ್ರದೇಶ’ದಲ್ಲಿ ಘರ್ ವಾಪಸಿ ಕಾರ್ಯಕ್ರಮದ ಮೂಲಕ 57 ಮುಸ್ಲಿಂ ಕುಟುಂಬಗಳನ್ನು ಹಿಂದೂ ಧರ್ಮಕ್ಕೆ ವಾಪಸ್ ಕರೆತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಂದಕಿಶೋರ್ ವಾಲ್ಮೀಕಿ ಎಂಬುವವರನ್ನು ಬಂಧಿಸಿದ್ದಾರೆ.

ಡಿ.16ರಂದು ಬಂಧಿಸಲಾಗಿರುವ ನಂದಕಿಶೋರ್ ವಿರುದ್ಧ ಒತ್ತಾಯಪೂರ್ವಕ ಮತಾಂತರ ನಡೆಸಿರುವ ಆರೋಪವಿದ್ದು ಎಫ್.ಐ.ಆರ್ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದಲ್ಲಿ ನಡೆದ ಘರ್ ವಾಪಸಿ ಕಾರ್ಯಕ್ರಮದಲ್ಲಿ ಮುಸ್ಲಿಮರು ಹಿಂದೂ ಧರ್ಮಕ್ಕೆ ವಾಪಸ್ಸಾಗಿರುವುದು ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದೆ.

ಮತಾಂತರ

ಭಜರಂಗದಳ ಹಾಗೂ ಧರ್ಮ ಜಾಗರಣ್ ಮಂಚ್ ಸಂಘಟನೆ ನಡೆಸಿದ್ದ ಘರ್ ವಾಪಸಿ ಕಾರ್ಯಕ್ರಮದ ವಿರುದ್ಧ ಆಗ್ರಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮ ಜಾಗರಣ ಮಂಚ್ ನ ನಂದಕಿಶೋರ್ ವಾಲ್ಮೀಕಿ ಎಂಬುವವರನ್ನು ಬಂಧಿಸಿದ್ದಾರೆ.

ಡಿ.25ರಂದು 5000 ಮುಸ್ಲಿಮರು ಹಾಗೂ ಕ್ರಿಶ್ಚಿಯನ್ ಸಮುದಾಯದವರನ್ನು ಹಿಂದೂ ಧರ್ಮಕ್ಕೆ ವಾಪಸ್ ಕರೆತರಲಾಗುವುದು ಎಂದು ವಿಶ್ವಹಿಂದೂ ಪರಿಷತ್ ಘೊಷಿಸಿತ್ತು. ಇದಕ್ಕೆ ಅನುಮತಿ ನೀಡುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದರು. ಅದರಂತೆಯೇ ಪ್ರಕರಣದ ಪ್ರಮುಖ ವ್ಯಕ್ತಿಯನ್ನು ಬಂಧಿಸಲಾಗಿದೆ.

By Suddi9

Leave a Reply

Your email address will not be published. Required fields are marked *