ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ೨೦೨೫-೨೦೨೬ನೇ ಸಾಲಿನ ಎನ್ ಎಸ್ ಎಸ್  ವಾರ್ಷಿಕ ವಿಶೇಷ ಶಿಬಿರಕ್ಕೆ ಬಂಟ್ವಾಳ ತಾಲೂಕಿನ ಬೊಳ್ಳಾಯಿ  ಶಾರದಾ ಭಜನಾ ಮಂದಿರದ ಸಭಾಂಗಣದಲ್ಲಿ ಚಾನೆ ನೀಡಲಾಯಿತು.
 
 
ವಿದ್ಯಾಕೇಂದ್ರದ ಸಂಚಾಲಕರಾದ ವಸಂತಮಾಧವ ಅವರು ಉದ್ಘಾಟಿಸಿ ಮಾತನಾಡಿ, ಎನ್ ಎಸ್ ಎಸ್ ಶಿಬಿರವು ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ಬಹಳ ಅಗತ್ಯ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಈ ಶಿಬಿರವು ಅತ್ಯಂತ ಸಹಕಾರಿಯಾಗಿದೆ ಎಂದರು.
 
ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ  ನಾರಾಯಣ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.    
 ಸಜಿಪನಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಯಕುಮಾರಿ, ಪಂಚಾಯತ್ ಅಧ್ಯಕ್ಷೆ ಶೋಭಾ ಶೆಟ್ಟಿ, ಶಾರದಾ ಭಜನಾಮಂದಿರದ ಅಧ್ಯಕ್ಷ ಕೃಷ್ಣಪ್ಪ ಕುಲಾಲ್ ಕೊಳಂಬೆ, ಪ್ರಾಥಮಿಕ ಆರೋಗ್ಯ ಕೇಂದ್ರದ ಜೆನಿಫರ್, ಶಿಕ್ಷಕ ರಕ್ಷಕ ಸಂಘದ ಅಧಗಯಕ್ಷ ಸತೀಶ್ ಬೊಳ್ಳಾಯಿ,
ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕಿ  ವಿನುತಾಲಕ್ಷ್ಮೀ ವೇದಿಕೆಯಲ್ಲಿ ದ್ದರು. 
ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಉಪ ಪ್ರಾಂಶುಪಾಲ ಯತಿರಾಜ್ ಪೆರಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಷ್ಟ್ರೀಯ ಸೇವಾ ಯೋಜನೆಯ ಸಹಸಂಯೋಜಕ ದೀಕ್ಷಿತ್, ಉಪನ್ಯಾಸಕಿ ಪ್ರಸನ್ನಾ  ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ನಾಯಕಿ ಕು. ಪ್ರಜ್ಞಾ ಸ್ವಾಗತಿಸಿ,  ವಿದ್ಯಾರ್ಥಿ ಜಯಸೂರ್ಯ ವಂದಿಸಿ,  ವಿದ್ಯಾರ್ಥಿನಿ ಕು. ಧನುಶ್ರೀ ಕಾರ್ಯಕ್ರಮ ನಿರೂಪಿಸಿದರು.  ಬಳಿಕ ಶ್ರಮದಾನದ ಉದ್ಘಾಟನೆ ನೆರವೇರಿಸಲಾಯಿತು. ಒಟ್ಟು ೬೭ ಮಂದಿ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಿದ್ದಾರೆ.

By suddi9

Leave a Reply

Your email address will not be published. Required fields are marked *