ಬಂಟ್ವಾಳ : ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, ಪ್ರಸ್ತುತ ಅಧ್ಯಕ್ಷರಾಗಿ ಸ ಸಹಕಾರ ಕ್ಷೇತ್ರದ ಸಾಧನೆ ಮತ್ತು  ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಯನ್ನು ಗುರುತಿಸಿ ರಾಜ್ಯದ ಮಾಧ್ಯಮ ಸಂಸ್ಥೆ ನೀಡಿರುವ *ಕರ್ನಾಟಕ ಸಹಕಾರ ಶಿರೋಮಣಿ 2025″* ಎಂಬ  ಪ್ರಶಸ್ತಿಗೆ ಭಾಜನರಾಗಿರುವ  ಪ್ರಭಾಕರ ಪ್ರಭು ಅವರನ್ನು  ಸಂಗಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು.

ಸರಳ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಜೀವಿ ಕೋಟಿಯಪ್ಪ ಪೂಜಾರಿ ವಹಿಸಿದ್ದರು. ಉಪಾಧ್ಯಕ್ಷ ಸುರೇಶ್ ಕುಲಾಲ್, ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ ಅಲಕ್ಕೆ,ಸದಸ್ಯರಾದ ಸಂದೇಶ ಶೆಟ್ಟಿ, ದಾಮೋದರ ಪೂಜಾರಿ, ಉದಯ ಪೂಜಾರಿ, ದೇವಪ್ಪ ಕರ್ಕೇರ, ಸುನೀಲ್ ಶೆಟ್ಟಿಗಾರ್, ವಿಮಲಾ ಮೋಹನ್,ಶಕುಂತಲಾ, ಶಾಂತ, ಪ್ರೇಮ, ವಿದ್ಯಾ ಪ್ರಭು, ಹೇಮಲತಾ,ಬೇನಾಡಿಕ್ಟ ಡಿ ಕೊಸ್ತ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮಾ ನಾಯ್ಕ್ ಸಿಬ್ಬಂದಿಗಳಾದ ಮಹಾಬಲ ನಾಯ್ಕ್, ಸುರೇಶ, ಸುಮತ, ಮಹಮ್ಮದ್ ಶಾಫಿ, ಕೇಶವತಿ, ಗ್ರಂಥಾಲಯ ಮೇಲ್ವಿಚಾರಕಿ ಶೋಭಾ, ಪ್ರಮುಖರಾದ ದೀಪಕ್ ಶೆಟ್ಟಿಗಾರ್, ಉಮೇಶ್ ಗೌಡ, ಪ್ರವೀಣ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಪಂಚಾಯತ್ ಕಾರ್ಯದರ್ಶಿ ರೋಹಿಣಿ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *