ಬಂಟ್ವಾಳ :ಪಾಣೆಮಂಗಳೂರು ಮತ್ತು ಬಂಟ್ವಾಳ  ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಬಗ್ಗೆ ವಿಚಾರ ಸಂಕಿರಣ ಕಾರ್ಯಕ್ರಮ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಮಂಗಳವಾರ ನಡೆಯಿತು.ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಬೂತ್ ಮಟ್ಟದ ಏಜೆಂಟ್ (ಬಿ.ಎಲ್.ಎ) ಮತ್ತು ವಲಯ ಕಾಂಗ್ರೆಸ್ ಅಧ್ಯಕ್ಷರಿಗಾಗಿ ಹಮ್ಮಿಕೊಳ್ಳಲಾದ ಈ ವಿಚಾರ ಸಂಕಿರಣವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.
ಬಳಿಕ ಮಾತನಾಡಿ,ಈ ಶಿಬಿರದ ಸಂಪೂರ್ಣ ಮಾಹಿತಿ ಪಡೆದುಕೊಂಡು ಮುಂದಿನ ದಿನಗಳಲ್ಲಿ ತಮ್ಮ ತಮ್ಮ ಬೂತ್ ಗಳಲ್ಲಿ ಕಾರ್ಯಗತಗೊಳಿಸಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾ.ವಾಸು ಎಚ್.ವಿ. ಮಾಹಿತಿ ನೀಡಿದರು. ಜಾಗೃತ ಕರ್ನಾಟಕದ ಸದಸ್ಯರಾದ ರಜನೀಕಾಂತ್, ಸಂತೋಷ್, ಮೋಹನ್ ಜಿ.ಕೆ, ಸಹಕರಿಸಿದರು.

ಕಾಂಗ್ರೆಸ್ ಪ್ರಚಾರ ಸಮಿತಿ ಉಸ್ತುವಾರಿ ದುರ್ಗಾ ಪ್ರಸಾದ್, ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅದ್ಯಕ್ಷ ಡೆನ್ನಿಸ್ ಡಿ.ಸಿಲ್ವ, ಜಿಲ್ಲಾ ಲೀಗಲ್ ಸೆಲ್ ಅದ್ಯಕ್ಷ ಪೊನ್ನುರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಚಂದ್ರಶೇಖರ್ ಭಂಡಾರಿ, ಬಾಲಕೃಷ್ಣ ಅಂಚನ್ ,ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಐಡಾ ಸುರೇಶ್, ನಿವೃತ್ತ ಎ.ಸಿ.ಎಫ್ ಮುಹಮ್ಮದ್, ಪಕ್ಷ ಪ್ರಮುಖರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಅಬ್ಬಾಸ್ ಅಲಿ, ಕೆ.ಪದ್ಮನಾಭ ರೈ, ಶೈಲಜಾ ರಾಜೇಶ್, ಜಯಂತಿ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *