ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ಮತ್ತು ರೋಟರಿ ಕ್ಲಬ್ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಫರಂಗಿಪೇಟೆಯಲ್ಲಿ ಮಂಗಳವಾರ ಏರ್ಪಡಿಸಿದ್ದ 71ನೇ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ರಕ್ಷಿತ್ ಕುಮಾರ್ ಮತ್ತು ಪುದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಮಹಮ್ಮದ್ ಶರೀಫ್ ಸ್ವತಃ ರಕ್ತದಾನ ಮಾಡಿದರು. ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಕಾರಂತ, ಟ್ರಸ್ಟಿ ಕೃಷ್ಣ ಕುಮಾರ್ ಪೂಂಜಾ, ಸಂಜೀವ ಪೂಜಾರಿ ಮತ್ತಿತರರು ಇದ್ದಾರೆ.

