ಬಂಟ್ವಾಳ: ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಸೇವಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಜಿ ಪುರಸಭಾ ಉಪಾಧ್ಯಕ್ಷ ಬಿ.ಮೋಹನ್ ಅವರು ಆಯ್ಕೆಯಾಗಿದ್ದಾರೆ.
 
ಉಳಿದಂತೆ ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ ಗುರುಕೃಪಾ,  ಪ್ರಧಾನ ಕಾರ್ಯದರ್ಶಿಯಾಗಿ ಎನ್.ಶಿವಶಂಕರ್, ಕೋಶಾಧಿಕಾರಿಯಾಗಿ ರಾಜೇಶ್.ಎಲ್.ನಾಯಕ್, ಜತೆ ಕಾರ್ಯದರ್ಶಿಯಾಗಿ ಸತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. 
ದೇವಸ್ಥಾನದ ವಠಾರದಲ್ಲಿ ಭಾನುವಾರ  ದೇವಳದ ಆಡಳಿತ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ತ್ರೈವಾರ್ಷಿಕ ಮಹಾಸಭೆಯಲ್ಲಿ ಮುಂದಿನ ಮೂರು ವರ್ಷದ ಅವಧಿಗೆ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಪ್ರಧಾನ ಕಾರ್ಯದರ್ಶಿ ಎನ್.ಶಿವಶಂಕರ್ ಸ್ವಾಗತಿಸಿ,ವಂದಿಸಿದರು

By suddi9

Leave a Reply

Your email address will not be published. Required fields are marked *