ಬಂಟ್ವಾಳ: ಬಿಜೆಪಿ ದ.ಕ.ಜಿಲ್ಲಾ ಓಬಿಸಿ ಮೋರ್ಚಾದ ಉಪಾಧ್ಯಕ್ಷರಾಗಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಆಯ್ಕೆಯಾಗಿದ್ದಾರೆ.

ಕಳೆದ 25 ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ವಿಟ್ಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಹಕಾರಿ ಪ್ರಕೋಷ್ಠದ ಸಂಚಾಲಕನಾಗಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಜಿಲ್ಲಾ ಓಬಿಸಿ ಮೋರ್ಚಾದ ಉಪಾಧ್ಯಕ್ಷನಾಗಿ, ನರಿಕೊಂಬು ಗ್ರಾಮ ಪಂಚಾಯತಿ ನ ಸದಸ್ಯನಾಗಿ , ಪ್ರಸ್ತುತ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದು,ಇದೀಗ
ಪಕ್ಷ ಅವರ ಪ್ರಾಮಾಣಿಕ ಸೇವೆ,ಸಂಘಟನಾತ್ಮಕ ಚಟುವಟಿಕೆಯನ್ನು ಗುರುತಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಈ ನೇಮಕಾತಿಯನ್ನು ಮಾಡಿದ್ದಾರೆ
