ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ.ಸಿ ಟ್ರಸ್ಟ್ (ರಿ.)ಇದರ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳುಗಳ ಕಾಲ  ನಡೆದ ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ ಬಂಟ್ವಾಳ ಭಂಡಾರಿಬೆಟ್ಟುವಿನ  ವ್ಯಾಯಾಮ ಶಾಲೆಯಲ್ಲಿ  ನಡೆಯಿತು.
ಬಂಟ್ವಾಳ ಪುರಸಭೆಯ ನಿಕಟ ಪೂರ್ವ ಸದಸ್ಯರಾದ ಹರಿಪ್ರಸಾದ್ ಶಿಬಿರವನ್ನು ಉದ್ಘಾಟಿಸಿ  ಮಾತಾಡಿ ಮಹಿಳೆಯರ ಸಬಲೀಕರಣಕ್ಕಾಗಿ ಮಹಿಳಾ ಜಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆಯುವ ಕಾರ್ಯಕ್ರಮಗಳು ಉತ್ತಮ ವೇದಿಕೆ ಯಾಗಿದೆ.ಮೂರು ತಿಂಗಳುಗಳ ಕಾಲ ಉಚಿತವಾಗಿ ಪಡೆದುಕೊಂಡ ತರಬೇತಿಯಿಂದ  ಸ್ವಾವಲಂಬಿಗಳಾಗಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೊನಾಲ್ಡ್ ಡಿಸೋಜ ಅಮ್ಟಾಡಿ ವಹಿಸಿದ್ದರು
ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು  ಯೋಜನಾಧಿಕಾರಿ ಜಯಾನಂದ ಪಿ.ಅವರು  ಮಾತನಾಡಿ ನಮ್ಮಲ್ಲಿರುವ ವಿದ್ಯೆಯನ್ನು ನಾವು ಸರಿಯಾಗಿ ಬಳಸಿದಾಗ ನಾವು ಯಶಸ್ವಿಯನ್ನು ಕಾಣಬಹುದಲ್ಲದೆ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಹಿಳೆಯರಿಗೆ ಸಿಗುವ ಸೌಲಭ್ಯಗಳ  ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ವಲಯ ಮೇಲ್ವಿಚಾರಕರಾದ ಗಿರೀಶ್, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸವಿತಾ, ತರಬೇತಿ ಶಿಕ್ಷಕಿ ವಸಂತಿ, ಒಕ್ಕೂಟದ ಅಧ್ಯಕ್ಷರಾದ ವಿಜಯ, ಸೇವಾ ಪ್ರತಿನಿಧಿ ವನಿತಾ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *