ಬಂಟ್ವಾಳ :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ  ಉಳಿ  ಭೂಮಿಕ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ  ಕಾರ್ಯಕ್ರಮ ಉಳಿ ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥ್ ರವರ ಅಧ್ಯಕ್ಷತೆಯಲ್ಲಿ ಉಳಿ ಕಕ್ಕೆಪದವಿನ  ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರಾದ  ಗಿರಿಯಪ್ಪ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಗತಿ ಬಂದು ಸ್ವ ಸಹಾಯ ಸಂಘಗಳ  ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಚಿದಾನಂದ  ರೈ ಮಾತಾಡಿ ಗ್ರಾಮಾಭಿವೃದ್ಧಿ ಯೋಜನೆಯಿಂದ  ಮಹಿಳೆಯರ  ಸಬಲೀಕರಣಕ್ಕಾಗಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ  ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು,ಮಾತೃಶ್ರೀ ಹೇಮಾವತಿ ಅಮ್ಮನವರ ದೂರ ದೃಷ್ಟಿಯ  ಸಮಾಜಮುಖಿ ಕಾರ್ಯಕ್ರಮದಿಂದ  ಅದೆಷ್ಟು ಕುಟುಂಬ ಸ್ವಾವಲಂಬಿಗಳಾಗಲು   ಸಹಕಾರಿಯಾಗಿದೆ ಎಂದರು

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ  ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ  ವಿದ್ಯಾ  ಮಹಿಳೆಯರ ಹಕ್ಕು ಮತ್ತು ಕಾನೂನಿನ ಬಗ್ಗೆ  ಸದಸ್ಯರಿಗೆ ಮಾಹಿತಿ ನೀಡಿದರು.
ಕೇಂದ್ರದ ಸದಸ್ಯರಿಗೆ  ವಿವಿಧ ಸ್ಪರ್ಧೆ ಏರ್ಪಡಿಸಿ . ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕೇಂದ್ರದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ವಲಯದ ಮೇಲ್ವಿಚಾರಕಿ ಸವಿತ. ಸೇವಾಪ್ರತಿನಿಧಿ ಉಷಾ, ಸುಧಾ ಉಪಸ್ಥಿತರಿದ್ದರು.
ಶೇಖರ್ ಸ್ವಾಗತಿಸಿ, ಜ್ಞಾನ ವಿಕಾಸ ಸಮನ್ವಯಧಿಕಾರಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *