ಬಂಟ್ವಾಳ: ಶಾಲಾಭಿವೃದ್ಧಿ ಸಮಿತಿಯ ಇಚ್ಛಾಶಕ್ತಿ ಶಾಲೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕಲ್ಲಡ್ಕ ಮಾದರಿ ಶಾಲಾ ಪದವೀಧರ ಮುಖ್ಯ ಶಿಕ್ಷಕ  ಅಬೂಬಕ್ಕರ್ ಅಶ್ರಫ್ ಹೇಳಿದರು. ಗುರುವಾರ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ಕ್ಲಸ್ಟರ್ ನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಿಗೆ  ನಡೆದ ಒಂದು ದಿನದ ತರಬೇತಿ ಕಾರ್ಯಭಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಜಿ  ಹಿರಿಯ ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ನಂತರ ನಡೆದ ತರಬೇತಿ ಕಾರ್ಯದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸಂಗೀತ ಶರ್ಮ,ಸಿ ಆರ್ ಪಿ ಜ್ಯೋತಿ,ಶಿಕ್ಷಣ ಹಕ್ಕು ಕಾಯಿದೆ ಅನ್ವಯ ಎಸ್ ಡಿ ಎಂ ಸಿ ಯ ರಚನೆ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕತ೯ವ್ಯಗಳು, ಶಾಲಾ ಅಭಿವೃದ್ಧಿ ಮತ್ತು ಮೇಲುಉಸ್ತುವಾರಿ ಸಮಿತಿ ನಿರ್ವಹಿಸಬೇಕಾದ ಕರ್ತವ್ಯಗಳು, ಗುಣಾತ್ಮಕ ಶಿಕ್ಷಣ,  ಸಮಿತಿಯ ಸಭೆಗಳು ಮತ್ತು ವಿಧಿ ವಿಧಾನಗಳು, ಶಾಲಾ ಅಭಿವೃದ್ಧಿ ಯೋಜನೆ ತಯಾರಿ, ಅನುಷ್ಠಾನ, ಅನು ಪಾಲನೆ, ಮೌಲ್ಯಮಾಪನ, ಮುಂತಾದವುಗಳ ಬಗ್ಗೆ  ವಿಷಯವನ್ನು ಮಂಡಿಸಲಾಯಿತು.ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ
ಡಾ| ಶಮನ್ .ಜೆ. ಶೆಟ್ಟಿ ರವರು 14 ವರ್ಷ ತುಂಬಿದ ಎಲ್ಲಾ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ಉಚಿತವಾಗಿ ನೀಡಲಾಗುವ  ಹೆಚ್.ಪಿ.ವಿ ಲಸಿಕೆಯ ಬಗ್ಗೆ ಮಾಹಿತಿ ನೀಡಿದರು.ಆರೋಗ್ಯ ಸುರಕ್ಷಣಾಧಿಕಾರಿ ಜ್ಯೋತಿ ಮತ್ತು ಆಶಾ ಕಾರ್ಯಕರ್ತೆ ಕೋಮಲಾಕ್ಷಿಯವರು  ಸಹಕರಿಸಿದರು.
ಮಜಿ  ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಸುನೀತ ಉಪಸ್ಥಿತರಿದ್ದರು.
ಶಾಲಾ ಮಕ್ಕಳು ಪ್ರಾರ್ಥಿಸಿ, ಕಲ್ಲಡ್ಕ ಕ್ಲಸ್ಟರ್ ಸಿಆರ್‌ಪಿ ಜ್ಯೋತಿ  ಸ್ವಾಗತಿಸಿ, ಮಜಿ ಶಾಲಾ ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಆಗ್ನೇಸ್ ಮೆಂಡೋನ್ಸಾ ವಂದಿಸಿದರು, ಸಹ ಶಿಕ್ಷಕ ತೌಸೀಫ್ ಅಹಮದ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ಸಹಕರಿಸಿದರು. 

By suddi9

Leave a Reply

Your email address will not be published. Required fields are marked *