ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ಶಂಕರಾಚಾರ್ಯ ಸಭಾಂಗಣದಲ್ಲಿ ವಿದ್ಯಾ ವಿಕಾಸ ಮತ್ತು ಶಿಶು ಶಿಕ್ಷಣ ಶಿಬಿರದ ಉದ್ಘಾಟನೆಯನ್ನು ಶ್ರೀರಾಮ ವಿದ್ಯಾ ಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ದೀಪ ಪ್ರಜ್ವಲನೆಯ ಮೂಲಕ ಚಾಲನೆ ನೀಡಿದರು.

ವೇದಿಕೆಯಲ್ಲಿ ಶ್ರೀರಾಮ ವಿದ್ಯಾ ಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ ,ವಿದ್ಯಾಭಾರತಿ ಕರ್ನಾಟಕ ಪ್ರಾಂತ ಉಪಾಧ್ಯಕ್ಷರಾದ ವಸಂತ ಮಾಧವ ಶ್ರೀಮಾನ್, ಕ್ಷೇತ್ರಿಯ ಶಿಶು ಶಿಕ್ಷಣ ಸಹ ಪ್ರಮುಖರಾದ ತಾರಾ, ಶ್ರೀರಾಮ ವಿದ್ಯಾ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಉಪಸ್ಥಿತರಿದ್ದರು.

ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ತಿರುಮಲೇಶ್ವರ್ ಪ್ರಶಾಂತ್ ಸ್ವಾಗತಿಸಿದರು.ಕು. ಶ್ವೇತ ಮಾತಾಜಿ ವಂದಿಸಿದರು.ಸಹಶಿಕ್ಷಕರಾದ ನಿತಿನ್ ರವರು ಕಾರ್ಯಕ್ರಮ ನಿರೂಪಿಸಿದರು.
ಶ್ರೀರಾಮ ವಿದ್ಯಾ ಕೇಂದ್ರದ ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು
