ಬಂಟ್ವಾಳ: ಸಜಿಪ ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಾವರ, ನಂದಾವರ ಕೋಟೆ, ದಾಸರಗುಡ್ಡೆ ಪರಿಸರದಲ್ಲಿ ವಿಶೇಷ ಲಾರ್ವ ಸಮೀಕ್ಷೆ ಕೈಗೊಳ್ಳಲಾಯಿತು.
ಬಂಟ್ವಾಳ ತಾಲೂಕಿನ ತಾಲೂಕು ಅರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ, ಸಜಿಪನಡು ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತುಫೈಲ್, ಹಿರಿಯ ಅರೋಗ್ಯ ನಿರೀಕ್ಷಣಾಧಿಕಾರಿ ಕುಸುಮ, ಹಿರಿಯ ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿ ಇಂದಿರಾ ಅವರು ಉಪಸ್ಥಿತರಿದ್ದರು.

ಬಂಟ್ವಾಳ ತಾಲೂಕಿನ ಎಲ್ಲಾ ಪ್ರಾಥಮಿಕ ಅರೋಗ್ಯ ಕೇಂದ್ರದ ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿಗಳು, ಅರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಸಜಿಪನಡು ವ್ಯಾಪ್ತಿಯ ಎಲ್ಲಾ ಆಶಾ ಕಾರ್ಯಕರ್ತೆಯರು ಮಳೆಗಾಲ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಮನೆ ಮನೆ ಭೇಟಿ ನೀಡಿ ಡೆಂಗೀ ನಿಯಂತ್ರಣ ಲಾರ್ವ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಸ್ವಚ್ಛತೆ ಬಗ್ಗೆ ವಿಶೇಷ ಮಾಹಿತಿ ನೀಡಿದರು.
ಯಾವುದೇ ಜ್ವರ ಪ್ರಕರಣ ಕಂಡು ಬಂದರೆ ಹತ್ತಿರದ ಪ್ರಾಥಮಿಕ ಅರೋಗ್ಯಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ಸಲಹೆ ನೀಡಲಾಯಿತು.
