ಬಂಟ್ವಾಳ : ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ ವೇಳೆ ಬೇಟಿ ನೀಡಿ ಪರಿಶೀಲಿಸಿದರು.

ಶನಿವಾರ ಸಂಜೆ ತಾಲೂಕಿನ ಮಣಿನಾಲ್ಕೂರು ಗ್ರಾಮದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ದೇವರ ಗರ್ಭಗುಡಿಯ ಮೇಲಿನ ಪ್ರಾಕಾರಕ್ಕೆ ಸಿಡಿಲು ಬಡಿದು ಅಪಾರ ನಷ್ಟವುಂಟಾಗಿತ್ತು.
ಸುದ್ದಿ ತಿಳಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅವರು ಭೇಟಿ ನೀಡಿ ದೇವಸ್ಥಾನದ ಪ್ರಮುಖರ ಜೊತೆ ಮಾತನಾಡಿದರು. ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ್ ಜೈನ್ ,ಪುರುಷೋತ್ತಮ ಪೂಜಾರಿ ಮತ್ತಿತರರು ಹಾಜರಿದ್ದರು.
