ಬಂಟ್ವಾಳ :ಜನಜಾತಿಯ ಗರಿಮಾ ಉತ್ಸವ 2026 ಪ್ರಯುಕ್ತ ಮೂಲ ನಿವಾಸಿಗಳಾದ ಕೊರಗ ಸಮುದಾಯದವರು ಮತ್ತು ಇತರೆ ಪರಿಶಿಷ್ಟ ಪಂಗಡದವರ ಕುಂದುಕೊರತೆ ಅಲಿಸುವ ಕಾರ್ಯಕ್ರಮ ಬುಧವಾರ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.ಕೊರಗ ಸಮುದಾಯದ ಮತ್ತು ಇತರೆ ಪರಿಶಿಷ್ಟ ಪಂಗಡದವರಿಗೆ ಸಾಮಾಜಿಕ ಭದ್ರತೆ ಯೋಜನೆಗಳು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಪ್ರಯೋಜನಗಳ ಕುರಿತು ಅರಿವು ಮೂಡಿಸುವುದರ ಜತೆಗೆ ಉಚಿತ ಅರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು

ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ವಿನಯ ಕುಮಾರಿ ಕೆ. ಬಿ, ತಾಲೂಕು ಅರೋಗ್ಯಾಧಿಕಾರಿ ಅಶೋಕ್ ರೈ, ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ,ವೀರಕಂಬ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ ಶರ್ಮಾ,ತಾಲೂಕು ಆಹಾರ ನಿರೀಕ್ಷಕರಾದ ಪ್ರಶಾಂತ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಕಿ ರೂಪಕಲಾ , ಬಂಟ್ವಾಳ ತಾಲೂಕು ಪಂಚಾಯತ್ ಮ್ಯಾನೇಜರ್ ಪ್ರಕಾಶ್,ವೀರಕಂಭ ಗ್ರಾಮ ಆಡಳಿತ ಅಧಿಕಾರಿ ವೈಶಾಲಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಇಲಾಖೆಗಳಿಂದ ಕೊರಗ ಸಮುದಾಯ ಮತ್ತು ಪರಿಶಿಷ್ಟ ಪಂಗಡದವರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ವ್ಯಾಪ್ತಿಯ ಆರೋಗ್ಯ ಸುರಕ್ಷಣಾಧಿಕಾರಿ, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವೀರಕಂಬ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಕೊರಗ ಸಮುದಾಯದ ಬಂಧುಗಳು ಭಾಗವಹಿಸಿ ಮಾಹಿತಿ ಪಡೆದುಕೊಂಡರು.
